Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಸೆಪ್ಟೆಂಬರ್ 17ಕ್ಕೆ ಹೊಸನಗರದಲ್ಲಿ ದಸರಾ ಕ್ರೀಡಾಕೂಟ

ಹೊಸನಗರ : ಇದೇ ಸೆಪ್ಟೆಂಬರ್‌‌ 17ರ ಮಂಗಳವಾರ ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ 2024-25ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದೆ ಎಂದು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರ ರಾವ್ ತಿಳಿಸಿದ್ದಾರೆ.

ಈ ಕ್ರೀಡಾಕೂಟವು ಅಥ್ಲೆಟಿಕ್ಸ್, ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ಒಳಗೊಂಡಿದೆ.

CLICK ಮಾಡಿ - ಕಾಳಿಕಾಪುರದ ಶ್ರೀ ಗಜಾನನ ಯುವಕ ಸೇವಾ ಸಮಿತಿ ಪದಾಧಿಕಾರಿಗಳಿಗೆ ಬೇಳೂರು 'ಟೀ ಶರ್ಟ್' ವಿತರಣೆ

ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಕ್ರೀಡೆಯಲ್ಲಿ ವಿಜೇತರಾದ ಆಯ್ಕೆ ತಂಡಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತವೆ. ಕ್ರೀಡಾಕೂಟದಲ್ಲಿ ಭಾಗವಹಿಸಲು ಇಚ್ಛಿಸುವರು ತಮ್ಮ ಆಧಾರ್ ಕಾರ್ಡ್‌ ತರುವುದು ಕಡ್ಡಾಯ ಹಾಗೂ ಪ್ರತೀ ಸ್ಪರ್ಧೆಗೆ ಕನಿಷ್ಠ ನಾಲ್ಕು ತಂಡಗಳು ಇರಬೇಕು. ಇಲ್ಲವಾದಲ್ಲಿ ಆಯೋಜಕರ ತೀರ್ಮಾನದಂತೆ ತಂಡ ಆಯ್ಕೆ ಮಾಡಿ ಮುಂದಿನ ಹಂತಕ್ಕೆ ಕಳುಹಿಸಲಾಗುವುದು. ಒಬ್ಬರಿಗೆ ಎರಡು ವೈಯಕ್ತಿಕ ಹಾಗೂ ಒಂದು ಗುಂಪು ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಇರುತ್ತದೆ.

ನಿಗದಿತ ದಿನಾಂಕದಂದು ಬೆಳಿಗ್ಗೆ ಸಮಯ 10 ಗಂಟೆ ಒಳಗಾಗಿ ಕ್ರೀಡಾಪಟುಗಳು ಸ್ಥಳದಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.

ಕಾಮೆಂಟ್‌ಗಳಿಲ್ಲ