Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಮೀನು ಸಾಕಾಣಿಕೆಯಲ್ಲಿ ಆಸಕ್ತಿ ಇರುವವರ ಗಮನಕ್ಕೆ... ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

ಹೊಸನಗರ : ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಮೀನು ಕೃಷಿ ಕೊಳಗಳ ನಿರ್ಮಾಣ ಒಟ್ಟು 5.33 ಹೆಕ್ಟೇರ್‌ಗಳು. ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ, ಸಾಂಪ್ರದಾಯಿಕ ಮೀನುಗಾರಿಕೆಗೆ ಎಫ್ರ‍್ಪಿ ಬದಲಿ ದೋಣಿ ನಿರ್ಮಾಣಕ್ಕಾಗಿ ಸಹಾಯ ಘಟಕಕ-01 (ಸಾಮಾನ್ಯ 01), ಮೀನು ಮರಿ ಪಾಲನಾ ಘಟಕ ನಿರ್ಮಾಣದ ಸಹಾಯ ಒಟ್ಟು 7.10 ಹೆಕ್ಟೇರ್ ಗುರಿ ಇದ್ದು, ಸಾಮಾನ್ಯ 03, ಮಹಿಳೆ 02, ಮತ್ತು ಪರಿಶಿಷ್ಡ ಪಂಗಡ 2.10 ಹೆಕ್ಷೇರ್, ಸೈಕಲ್ ವಿತ್ ಐಸ್ ಬಾಕ್ಸ್ ಸಾಮಾನ್ಯ ವರ್ಗಕ್ಕೆ 01 ಗುರಿ ಹಾಗೂ ಹೊಸದಾದ ಮೀನು ಮಾರಾಟ ಕಿಯೋಸ್ಕ್ ನಿರ್ಮಾಣಕ್ಕಾಗಿ ಅಲಂಕಾರಿಕ ಮೀನು ಮಾರಾಟ ಮಳಿಗೆ ಪರಿಶಿಷ್ಟ ಜಾತಿ 01 ಗುರಿ ನೀಡಲಾಗಿದೆ.

VIDEO - ಕೂಡಲೇ ರಾಜೀನಾಮೆ ನೀಡಿ ತನಿಖೆ ಎದುರಿಸಿ ಸಿದ್ಧರಾಮಯ್ಯ ಶುದ್ಧರಾಮಯ್ಯ ಆಗಲಿ... ಹೊಸನಗರದಲ್ಲಿ ಶಾಸಕ ಆರಗ ಜ್ಞಾನೇಂದ್ರ

ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40ರಷ್ಟು ಹಾಗೂ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಹಿಳಾ ಫಲಾನುಭವಿಗಳಿಗೆ ಶೇ. 60ರಷ್ಟು ಸಹಾಯಧನ ನೀಡಲಾಗುವುದು.

ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ.10 ರೊಳಗಾಗಿ ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಪೂರ್ಣ ದಾಖಲೆಗಳೊಂದಿಗೆ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ