ಹೊಸನಗರದಲ್ಲಿ ಗ್ಯಾರಂಟಿ ಅನುಷ್ಠಾನ ಕಚೇರಿ ಉದ್ಘಾಟಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು
ಹೊಸನಗರ : ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಕಚೇರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು.
ನ್ಯೂಸ್ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ
ಕಚೇರಿ ಉದ್ಘಾಟಿಸಿ ಮಾತನಾಡಿದ ಶಾಸಕರು, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಪಾಲಿಗೆ ವರವಾಗಿ ಪರಿಣಮಿಸಿದೆ. ಬಡ ಹಾಗೂ ಮಧ್ಯಮ ವರ್ಗದ ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸಿದೆ. ಯೋಜನೆ ಇನ್ನೂ ತಲುಪದ ಕುಟುಂಬಗಳಿಗೆ ಗ್ಯಾರಂಟಿ ತಲುಪಿಸಲು ತಾಲ್ಲೂಕಿನ ಸಮಿತಿ ಕೆಲಸ ಮಾಡಲಿದೆ ಎಂದರು.
ಈ ಸಮಾರಂಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಚಂದ್ರ ಭೂಪಾಲ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಬಿ. ಚಿದಂಬರ, ತಹಶೀಲ್ದಾರ್ ರಶ್ಮಿ ಹೆಚ್.ಜೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಚಂದ್ರಕಲಾ ನಾಗರಾಜ್, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಬಿ. ಆರ್. ಪ್ರಭಾಕರ್, ರಿಪ್ಪನ್‌ಪೇಟೆಯ ಫ್ಯಾನ್ಸಿ ರಮೇಶ್, ಉಬೇದುಲ್ಲಾ, ಕೆರೆಹಳ್ಳಿ ರವೀಂದ್ರ, ಸಿಂಥಿಯಾ ಸೆರಾವೋ, ಅಕ್ಷತಾ ನಾಗರಾಜ, ಬುಕ್ಕಿವರೆ ಮಹೇಂದ್ರ, ನರಸಿಂಹ ಪೂಜಾರಿ, ಅನಿಲ್ ಕುಮಾರ್, ಎನ್. ಟಿ. ಕೃಷ್ಣಮೂರ್ತಿ, ಪೂರ್ಣಿಮಾ, ಮಳವಳ್ಳಿ ಸಂತೋಷ್, ಸುಮಂಗಳ ದೇವರಾಜ್, ಕರುಣಾಕರ್, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ