ಹರಿದ್ರಾವತಿಯಲ್ಲಿ ಸಡಗರ ಸಂಭ್ರಮದ ಪೋಷಣ್ ಮಾಸಾಚರಣೆ ಕಾರ್ಯಕ್ರಮ
ಹೊಸನಗರ : ತಾಲ್ಲೂಕಿನ ಹರಿದ್ರಾವತಿಯಲ್ಲಿ ಮಹಿಳಾ ಮತ್ತು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳ ಇಲಾಖೆ ಹಾಗೂ ಹರಿದ್ರಾವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರು ಸಂಘಟಿತರಾಗಿ, ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಿದರು.
ನ್ಯೂಸ್ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ
ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಆರ್. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಗೋಪಾಲ್ ಗುರುಮೂರ್ತಿ, ಶ್ರೀಮತಿ ಸೀತಾ ಸಂತೋಷ್, ಶ್ರೀಮತಿ ಪೂರ್ಣಿಮಾ ಲಕ್ಷ್ಮಣ್, ಶ್ರೀಮತಿ ವಿಶಾಲ ಮೊದಲದವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಹರಿದ್ರಾವತಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಗೌತಮ್, ಪುರಪ್ಪೆಮನೆ ಆಯುಷ್ ಕೇಂದ್ರದ ಡಾ. ಪತಂಜಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾತನಾಡಿ, ಪೌಷ್ಟಿಕ ಆಹಾರ ಸೇವನೆಯಿಂದ ರಕ್ತ ಹೀನತೆಯನ್ನು ಹೋಗಲಾಡಿಸಬಹುದು. ಪ್ರತಿವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಪೋಷಣ್ ಮಾಸಾಚರಣೆಯನ್ನು ಮಹಿಳಾ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರ ಇಲಾಖೆಯವರು ಆಚರಿಸುತ್ತಾರೆ. ಇದರ ಪ್ರಯೋಜನವನ್ನು ಎಲ್ಲ ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಪಡೆಯಬೇಕೆಂದು ಕರೆ ನೀಡಿದರು.
ಸಮಾರಂಭದಲ್ಲಿ ವಿವಿಧ ರೀತಿಯ ಪೌಷ್ಟಿಕ ಆಹಾರ ಪ್ರದರ್ಶನ, ಗರ್ಭಿಣಿಯರಿಗೆ ಸೀಮಂತ, ಆರು ತಿಂಗಳು ತುಂಬಿದ ಮಕ್ಕಳಿಗೆ ಅನ್ನಪ್ರಾಶನ ಹಮ್ಮಿಕೊಳ್ಳಲಾಗಿತ್ತು.
ಗರ್ಭಿಣಿಯರು, ಮಕ್ಕಳ ತಾಯಂದಿರು ಹಾಗೂ ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಮೇಲ್ವಿಚಾರಕಿ ಶ್ರೀಮತಿ ಬಂಗಾರಮ್ಮ, ಇಲಾಖೆ ಇಲಾಖೆಯ ವಿವಿಧ ಯೋಜನೆಗಳ ವಿವರಗಳನ್ನು ನೀಡಿದರು.
ನವ್ಯ ಪ್ರಾರ್ಥಿಸಿದರು. ಶ್ರೀಮತಿ ರಜತಾದ್ರಿ ಸ್ವಾಗತಿಸಿದರು. ಶ್ರೀಮತಿ ಶಕುಂತಲಾ ನಂದಿಹೊಳೆ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಪುಷ್ಪ ವಂದಿಸಿದರು.
ಕಾಮೆಂಟ್‌ಗಳಿಲ್ಲ