ಹೊಸನಗರದಲ್ಲಿ ಸಂಭ್ರಮದ ಶಿಕ್ಷಕ ದಿನಾಚರಣೆ | ಶಿಕ್ಷಣಾಧಿಕಾರಿ ಕಚೇರಿಗೆ ವಾಹನ ಸೌಲಭ್ಯ ಹಾಗೂ ಶಿಕ್ಷಕರಿಗಾಗಿ ಗುರುಭವನ ನಿರ್ಮಾಣ ಭರವಸೆ ನೀಡಿದ ಶಾಸಕರು
ಹೊಸನಗರ : ಪಟ್ಟಣದ ಈಡಿಗರ ಸಭಾಭವನದಲ್ಲಿ ಇಂದು ಭಾರತ ರತ್ನ ಡಾಕ್ಟರ್ ಎಸ್. ರಾಧಾಕೃಷ್ಣನ್‌ರವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಸಂಭ್ರಮದಿಂದ ಆಚರಿಸಲಾಯಿತು.
ನ್ಯೂಸ್ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕರು, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಶಿಕ್ಷಣ ಅಧಿಕಾರಿಗಳ ಕಚೇರಿಗೆ ಕೊರತೆ ಇರುವ ವಾಹನ ಸೌಲಭ್ಯ ಹಾಗೂ ಶಿಕ್ಷಕರಿಗಾಗಿ ಲಭ್ಯವಿರದ ಗುರುಭವನ ನಿರ್ಮಾಣಕ್ಕೆ ತಮ್ಮ ಅಭಯ ಹಸ್ತ ನೀಡಿದರು.
ತಾಲ್ಲೂಕಿನ ಹಿರಿಯ ಕಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳ ಉತ್ತಮ ಶಿಕ್ಷಕರಿಗೆ ಹಾಗೂ ಶೇಕಡಾ 100 ಫಲಿತಾಂಶ ಗಳಿಸಿದ ಶಾಲೆಗಳ ಮುಖ್ಯೋಪಾಧ್ಯಾಯರುಗಳನ್ನು ಸನ್ಮಾನಿಸಿದ ಅವರು, ಶಿಕ್ಷಕರು ಅರ್ಪಣಾ ಮನೋಭಾವ ಹೊಂದುವಂತೆ ಕರೆ ನೀಡಿದರು.
ಮಾಜಿ ಗೃಹ ಸಚಿವರು, ಶಾಸಕರಾದ ಆರಗ ಜ್ಞಾನೇಂದ್ರರವರು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿದರು.
ಲೇಖಕರು ಹಾಗೂ ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಶುಭಾ ಮರವಂತೆ ವಿಶೇಷ ಉಪನ್ಯಾಸ ನೀಡಿ, ಶಿಕ್ಷಕರ ಕರ್ತವ್ಯ ಜ್ಞಾನದ ಅರಿವು ಜವಾಬ್ದಾರಿಗಳ ಬಗ್ಗೆ ಮಾತನಾಡಿದರು.
CLICK ಮಾಡಿ - ಬೇಳೂರು ನಾಗೋಡಿ ಸ.ಹಿ.ಪ್ರಾ.ಶಾಲೆಯ ಶಿಕ್ಷಕಿ ದೀಪಾ ಅವರಿಗೆ ತಾಲ್ಲೂಕು ಉತ್ತಮ ಶಿಕ್ಷಕಿ ಪ್ರಶಸ್ತಿ
ತಹಶೀಲ್ದಾರ್ ರಶ್ಮಿ ಹೆಚ್.ಜೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗರಾಜ, ಉಪಾಧ್ಯಕ್ಷೆ ಚಂದ್ರಕಲಾ ನಾಗರಾಜ್, ಮುಖ್ಯಾಧಿಕಾರಿ ಉಮೇಶ್ ಎಸ್. ಗುಡ್ಡದ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವಣ್ಣಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್. ಆರ್. ಸುರೇಶ್, ಪ್ರಾಥಮಿಕ ಶಾಲೆ ಬಡ್ತಿ ಮುಖ್ಯ ಶಿಕ್ಷಕರ ಸಂಘದ ಸಂಘದ ಅಧ್ಯಕ್ಷೆ ಲಿಲ್ಲಿ ಡಿಸೋಜಾ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕೆ. ಬಾಲಚಂದ್ರ ರಾವ್, ಪಿಎಂ ಪೋಷಣ್ ಶಕ್ತಿ ನಿರ್ಮಾಣ ಯೋಜನೆಯ ಸಹಾಯಕ ನಿರ್ದೇಶಕ ಶೇಷಾಚಲ ಜಿ. ನಾಯಕ್, ಸಮನ್ವಯಾಧಿಕಾರಿ ಎಂ ರಂಗನಾಥ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
2024-25ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಹಾರಂಬಳ್ಳಿ ಶಾಲೆಯ ಹೆಚ್. ಮೋಹನ್ ಕುಮಾರ್, ಹಿರಿಯ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಸಮಟಗಾರಿನ ಅಂಬಿಕಾ, ಪ್ರೌಢಶಾಲಾ ವಿಭಾಗದಲ್ಲಿ ಸೊನಲೆಯ ಶ್ರೀಮೂರ್ತಿ ಹಾಗೂ ಎಲ್. ಗುಡ್ಡೇಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯ ಬಿ. ಗಂಗಾಧರ, ಜೇನಿ ಹಿರಿಯ ಪ್ರಾಥಮಿಕ ಶಾಲೆಯ ಡಿ. ಶಂಕರಪ್ಪ, ಪ್ರೌಢಶಾಲಾ ವಿಭಾಗದಲ್ಲಿ ನಿಟ್ಟೂರಿನ ಕಮರುಲ್ಲಾ ಜಿಲ್ಲಾ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮಹಮ್ಮದ್ ಅಲ್ತಾಫ್ ಹಾಗೂ ನಿಕಟಪೂರ್ವ ಅಕ್ಷರ ದಾಸೋಹ ನಿರ್ದೇಶಕ ಎಸ್. ಪಿ. ನಾಗರಾಜ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ವಸುಧಾ ಪ್ರಾರ್ಥಿಸಿದರು. ಬಳಿಕ ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಮುಖ್ಯ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶ್ರೀಮತಿ ದೀಪ ಹಾಗೂ ಪ್ರದೀಪ ಕಾರ್ಯಕ್ರಮ ನಿರೂಪಿಸಿದರು.
ಕಾಮೆಂಟ್‌ಗಳಿಲ್ಲ