Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಐಟಿಐ ತೇರ್ಗಡೆ ಹೊಂದಿದವರಿಗೆ HALನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಹೊಸನಗರ : ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ, ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.


ಎಸ್‌ಎಸ್‌ಎಲ್‌ಸಿ + ಐಟಿಐ, ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಓಪಿಎ (COPA), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್ ಡೈಮೇಕರ್, ಸಿಎನ್‌ಸಿ ಪ್ರೋಗ್ರಾಮರ್ ಕಂ ಆಪರೇಟರ್‌ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

CLICK ಮಾಡಿ - 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ - ಅರ್ಜಿ ಆಹ್ವಾನ

ಆಸಕ್ತರು ತಮ್ಮ ಎಸ್‌ಎಸ್‌ಎಲ್‌ಸಿ + ಐಟಿಐ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್  ಕಾರ್ಡ್, ಪೋರ್ಟಲ್ ರಿಜಿಸ್ಟ್ರೇಶನ್ ಸಂಖ್ಯೆ, ಎಂಪ್ಲಾಯ್ಮೆಂಟ್ ಕಾರ್ಡ್, ಪಾಸ್‌ಪೋರ್ಟ್ ಸೈಜಿನ 4 ಫೋಟೋಗಳು ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ಗುತ್ಯಪ್ಪ ಕಾಲೋನಿ, ಪಂಪಾ ನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ದಿನಾಂಕ 05/10/2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ದೂರವಾಣಿ ಸಂಖ್ಯೆ 08182-255293, 9380663606ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಮೂಲ : ಡಿಐಪಿಆರ್‌ ಶಿವಮೊಗ್ಗ

ಕಾಮೆಂಟ್‌ಗಳಿಲ್ಲ