Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಮೇಲಿನಬೆಸಿಗೆಯಲ್ಲಿ ಯಶಸ್ವಿಯಾಗಿ ನಡೆದ ಕ್ಲಸ್ಟರ್‌ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟ | ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಸಹಕಾರ‌ ಅಗತ್ಯ : ಗ್ರಾ.ಪಂ.ಅಧ್ಯಕ್ಷ ಶ್ರೀನಿವಾಸ ರೆಡ್ಡಿ

ಹೊಸನಗರ: ಮಕ್ಕಳ ಶೈಕ್ಷಣಿಕ ಪ್ರಗತಿಯ ಜೊತೆಗೆ ಅವರ ಭೌತಿಕ ಪ್ರಗತಿಯು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ನೆರವು ನೀಡುವ ಅಗತ್ಯ ಇದೆ ಎಂದು ಮೇಲಿನಬೆಸಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ಹೇಳಿದರು.

ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲಾ ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ 14 ವರ್ಷದೊಳಗಿನ ರಾಮಚಂದ್ರಪುರ ಮತ್ತು ಸೊನಲೆ ಕ್ಲಸ್ಟರ್ ಮಟ್ಟದ 2024-25ನೇ ಸಾಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

CLICK ಮಾಡಿ - ಹೊಸನಗರದಲ್ಲಿ ಗ್ಯಾರಂಟಿ ಅನುಷ್ಠಾನ ಕಚೇರಿ ಉದ್ಘಾಟಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು

ಚುನಾಯಿತ ಜನಪ್ರತಿನಿಧಿಯಾಗಿ ಮಕ್ಕಳ ಭೌತಿಕ ಹಾಗೂ ಮಾನಸಿಕ ವಿಕಸನಕ್ಕೆ ಅಗತ್ಯ ಇರುವ ಎಲ್ಲಾ ಸೌಲಭ್ಯ ಒದಗಿದಲು ತಾವು ಬದ್ಧ ಇರುವುದಾಗಿ ಅವರು ತಿಳಿಸಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪೂರ್ಣಿಮಾ ಸೋಮಶೇಖರ್ ಕ್ರೀಡಾಪಟುಗಳಿಗೆ ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು.

ಪ್ರಾಥಮಿಕ ಶಾಲೆಯ ಎಸ್‌‌ಡಿಎಂಸಿ ಅಧ್ಯಕ್ಷ ಸುರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಿಇಓ ಕೃಷ್ಣಮೂರ್ತಿ, ಪಿಎಂ ಪೋಷಣ್ ವಿಭಾಗದ ಸಹಾಯಕ ನಿರ್ದೇಶಕ ಶೇಷಾಚಲ ಜಿ.ನಾಯಕ್, ಬಿ.ಆರ್.ಸಿ ಸಮನ್ವಯ ಅಧಿಕಾರಿ ರಂಗನಾಥ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರರಾವ್, ಗ್ರಾ.ಪಂ.ಸದಸ್ಯರಾದ ಜ್ಯೋತಿ, ಚಂದ್ರಕಲಾ, ರಾಜೇಶ್, ನಾಗರಾಜ್, ಲಕ್ಷ್ಮಣಗೌಡ, ಶಾಂತ, ಧರ್ಮಪ್ಪ, ಲಕ್ಷ್ಮೀದೇವಿ, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ಪುಟ್ಟಸ್ವಾಮಿ ಸೇರಿದಂತೆ ಕ್ಲಸ್ಟರ್ ಮಟ್ಟದ ಹಲವು ಶಿಕ್ಷಕರು ಉಪಸ್ಥಿತರಿದ್ದರು.

ಇದೇ ವೇಳೆ ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟದ ಸಾಧನೆಗೈದ ಎಲ್. ಗುಡ್ಡೇಕೊಪ್ಪ ಶಾಲಾ ಶಿಕ್ಷಕ ಗಂಗಾಧರ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಸಿಆರ್‌‌ಪಿ ನಾಗಭೂಷಣ ಸ್ವಾಗತಿಸಿ, ಶಿಕ್ಷಕ ಧರ್ಮಪ್ಪ ನಿರೂಪಿಸಿ, ಶಿಕ್ಷಕ ಗುರುಮೂರ್ತಿ ವಂದಿಸಿದರು.


ಕಾಮೆಂಟ್‌ಗಳಿಲ್ಲ