ಹೊಸನಗರದ ಹಿರಿಯ ನಾಗರೀಕರ ಗಮನಕ್ಕೆ... ಸೆಪ್ಟೆಂಬರ್ 5ರಂದು ಶಿವಮೊಗ್ಗದಲ್ಲಿ ಹಿರಿಯ ನಾಗರೀಕರಿಗಾಗಿ ನಡೆಯಲಿದೆ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ
ಹೊಸನಗರ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಕ್ಟೋಬರ್ 1 ರ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಇದೇ ಸೆಪ್ಟೆಂಬರ್ 05ರ ಗುರುವಾರದಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಹಿರಿಯ ನಾಗರೀಕರಿಗಾಗಿ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಿದೆ.
ಪುರುಷರಿಗೆ ಕ್ರೀಡಾ ಸ್ಪರ್ಧೆಗಳು: 60-70 ವರ್ಷದವರಿಗೆ ಮ್ಯೂಸಿಕಲ್ ಚೇರ್, 60-69 ವರ್ಷದವರಿಗೆ - ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು. 70 ವರ್ಷದವರಿಗೆ ಹಾಗೂ ಮೇಲ್ಪಟ್ಟವರಿಗೆ - ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು.
ಮಹಿಳೆಯರಿಗೆ ಕ್ರೀಡಾ ಸ್ಪರ್ಧೆಗಳು: 60-70 ವರ್ಷದವರಿಗೆ ಮ್ಯೂಸಿಕಲ್ ಚೇರ್. 60-69 ವರ್ಷದವರಿಗೆ ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು.70 ವರ್ಷ ಹಾಗೂ ಮೇಲ್ಪಟ್ಟವರಿಗೆ- ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವುದು.
ಪುರುಷರಿಗೆ ಸಾಂಸ್ಕೃತಿಕ ಸ್ಪರ್ಧೆಗಳು : 60-69 ವರ್ಷದವರಿಗೆ - ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ, 70 ವರ್ಷ ಹಾಗೂ ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ.
ಮಹಿಳೆಯರಿಗೆ ಸಾಂಸ್ಕೃತಿಕ ಸ್ಪರ್ಧೆಗಳು : 60-69 ವರ್ಷದವರಿಗೆ - ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ, 70 ವರ್ಷ ಹಾಗೂ ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ.
ಆಸಕ್ತ ಹಿರಿಯ ನಾಗರೀಕರು 60 ವರ್ಷ ಮೇಲ್ಪಟ್ಟವರಾಗಿರಬೇಕು, ಆಧಾರ್ ಕಾರ್ಡ್ ಮತ್ತು ಹಿರಿಯ ನಾಗರೀಕರ ಗುರುತಿನ ಚೀಟಿಯೊಂದಿಗೆ ದಿನಾಂಕ : 04-09-2024ರ ಒಳಗಾಗಿ ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರ, ಡಿ.ವೈ.ಎಸ್.ಪಿ ಕಛೇರಿ ಆವರಣ, ಶಿವಮೊಗ್ಗ ಇಲ್ಲಿ ನೋಂದಣಿ ಮಾಡಿಸಿಕೊಳ್ಳತಕ್ಕದ್ದು.
ನೋಂದಣಿಗಾಗಿ ದೂ.ಸಂ : ರವೀಂದ್ರ - 9164444370, ಯುವರಾಜ - 9632570371 ಮತ್ತು ಕಚೇರಿ ದೂರವಾಣಿ ಸಂಖ್ಯೆ - 08182-221188/260424 ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ