ಶಿವಮೊಗ್ಗ ಜಿಲ್ಲೆಯಾದ್ಯಂತ ಈ ಬಾರಿ ಗಣೇಶೋತ್ಸವ - ಈದ್ ಮಿಲಾದ್‌ಗೆ ಡಿಜೆ ನಿಷೇಧ
ಶಿವಮೊಗ್ಗ : ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪೂರ್ಣಗೊಳ್ಳುವವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಆದೇಶಿಸಿದ್ದಾರೆ.
ನ್ಯೂಸ್ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ
ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಸೆ. 07ನೇ ತಾರೀಖಿನಿಂದ ಗಣೇಶೋತ್ಸವ ಪೂರ್ಣಗೊಳ್ಳುವವರೆಗೆ ಹಾಗೂ ಸೆ. 16ನೇ ತಾರೀಖಿನಿಂದ ಈದ್ ಮಿಲಾದ್ ಹಬ್ಬ ಪೂರ್ಣಗೊಳ್ಳುವವರೆಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿ.ಜೆ.ಸಿಸ್ಟಂ ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕಾಮೆಂಟ್‌ಗಳಿಲ್ಲ