ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ - ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಹೊಸನಗರ : ಇಂದು ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಗೇರುಪುರ ಇಂದಿರಾಗಾಂಧಿ ವಸತಿ ಶಾಲೆಯ ಮಕ್ಕಳು 100 ಮೀ, 400 ಮೀ ಹಾಗೂ 600 ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
100 ಮೀ ಓಟ, 400 ಮೀ ಓಟ, 600 ಮೀ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದರೆ, ರಿಲೇ ಹಾಗೂ ಥ್ರೋಬಾಲ್‌ನಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ವಸತಿ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರ ಪರವಾಗಿ ಮತ್ತು ಎಲ್ಲಾ ಪೋಷಕರ ಪರವಾಗಿ ಹಾಗೂ ಇಲಾಖೆಯ ಎಲ್ಲಾ ಅಧಿಕಾರಿಗಳ ಪರವಾಗಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ ಎಂ. ಪಿ ಅಭಿನಂದನೆ ಸಲ್ಲಿಸಿದ್ದಾರೆ.
ಕಾಮೆಂಟ್‌ಗಳಿಲ್ಲ