ಅಮೃತ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಪಕ್ಷೇತರ ಅಭ್ಯರ್ಥಿ ಸಚಿನ್ ಗೌಡ ಆಯ್ಕೆ
ಹೊಸನಗರ : ತಾಲ್ಲೂಕಿನ ಅಮೃತ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರ ಆಯ್ಕೆ ಚುನಾವಣೆ ಇಂದು ನಡೆದಿದ್ದು, ಸಚಿನ್ ಗೌಡ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿಶ್ವನಾಥ ಗಂಧ್ರಳ್ಳಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆದು ಸಚಿನ್ ಗೌಡ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.
ಅಮೃತ ಪಂಚಾಯಿತಿಯಲ್ಲಿ ಒಟ್ಟು 11 ಜನ ಸದಸ್ಯ ಬಲವಿದ್ದು, ಇದರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ದೇವರಾಜ್ ಹೊಳೆಕೆವಿ ಅವರು 04 ಮತಗಳನ್ನು ಪಡೆದಿದ್ದರೆ, ಪಕ್ಷೇತರ ಅಭ್ಯರ್ಥಿ ಸಚಿನ್ ಗೌಡ 7 ಮತಗಳನ್ನು ಪಡೆಯುವ ಮೂಲಕ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೊದಲು ಅಧ್ಯಕ್ಷರಾಗಿದ್ದ ವಿಶ್ವನಾಥ್ ಗಂಧ್ರಳ್ಳಿ ಆಂತರಿಕವಾಗಿ ಪಕ್ಷದೊಳಗೆ ಮಾಡಿಕೊಂಡ ಒಪ್ಪಂದದಂತೆ ದೇವರಾಜ್ ಹೊಳೆಕೆವಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಉದ್ದೇಶದಿಂದ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈ ನಡುವೆ ಸಚಿನ್ ಗೌಡ ತಮ್ಮ ರಾಜಕೀಯ ದಾಳ ಉರುಳಿಸಿ ಇಬ್ಬರು ಸದಸ್ಯರ ಬೆಂಬಲವನ್ನು ಮೊದಲೇ ಖಾತ್ರಿ ಮಾಡಿಕೊಂಡು ಕಾಂಗ್ರೆಸ್ ಬೆಂಬಲಿತ ನಾಲ್ಕು ಸದಸ್ಯರ ಬೆಂಬಲದ ಮೂಲಕ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.
ಕಾಮೆಂಟ್‌ಗಳಿಲ್ಲ