ದೀಪಾವಳಿ - ಹೊಸನಗರದ ಅಧಿಕಾರಿಗಳಿಗೆ ಸಿಹಿ ಹಂಚಿ ಶುಭ ಕೋರಿದ ಶಾಸಕ ಬೇಳೂರು
ಹೊಸನಗರ : ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಪಟ್ಟಣದ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸಿಹಿ ಹಂಚುವ ಮೂಲಕ ಹಬ್ಬದ ಶುಭಾಶಯ ತಿಳಿಸಿದರು.
ಈ ವರ್ಷದ ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಇಂದು ಹೊಸನಗರದ ಸುಮಾರು 45 ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತಮ್ಮ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜುನಾಥ್ ಮೂಲಕ ಸಿಹಿ ನೀಡಿ ಶುಭಕೋರಿದರು.
ಕಾಮೆಂಟ್‌ಗಳಿಲ್ಲ