ಹೊಸನಗರದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ
ಹೊಸನಗರ: ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಸಭೆ ನಡೆಯಿತು.
ನ್ಯೂಸ್ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ
ಸಮಿತಿ ಅಧ್ಯಕ್ಷ ಚಿದಂಬರ್ ಹೆಚ್. ಬಿ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತಂತೆ ಚರ್ಚಿಸಲಾಯಿತು.
ಸಭೆಯಲ್ಲಿ ಯೋಜನೆ ಅನುಷ್ಠಾನ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳು ಪ್ರಗತಿ ವರದಿ ಮಂಡಿಸಿದರು. ಹಿಂದಿನ ಸಭೆಗೆ ಸಂಬಂಧಿಸಿದ ಅನುಪಾಲನಾ ವರದಿ ಪಡೆಯಲಾಯಿತು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಚಿದಂಬರ ಮಾತನಾಡಿ, ಯಾವುದೇ ಯೋಜನೆಗಳ ಅನುಷ್ಠಾನದಲ್ಲಿ ತಾಂತ್ರಿಕ ಸಮಸ್ಯೆ ಇದ್ದಲ್ಲಿ ಸಮಸ್ಯೆಗಳ ಪಟ್ಟಿ ಮಾಡಿ ಪ್ರತಿ ತಿಂಗಳ 15ನೇ ತಾರೀಖಿನೊಳಗೆ ತಾಲ್ಲೂಕು ಪಂಚಾಯಿತಿ ಕಚೇರಿಗೆ ಸಲ್ಲಿಸುವಂತೆ ಸೂಚಿಸಿದರು.
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಆನ್ಲೈನಿನಲ್ಲಿ ಅವಕಾಶ ಕಲ್ಪಿಸುವ ಬಗ್ಗೆ ಜಿಲ್ಲಾ ಸಮಿತಿ ಸಭೆಯಲ್ಲಿ ಚರ್ಚಿಸುವುದು, ಎಲ್ಲಾ ಪಡಿತರ ಚೀಟಿಗಳಿಗೆ ಕಡ್ಡಾಯವಾಗಿ ಇಕೆವೈಸಿ ಮಾಡಿಸುವುದು, ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸದೆ ಬಾಕಿ ಇರುವ ಫಲಾನುಭವಿಗಳ ಮಾಹಿತಿಯನ್ನು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಟ್ಟಿ ಮಾಡಿ ಸಲ್ಲಿಸುವುದು, ಯುವ ನಿಧಿ ಯೋಜನೆ ಸೌಲಭ್ಯ ಪಡೆಯದೇ ಇರುವವರ ಪಟ್ಟಿ ತಯಾರಿಸುವುದು, ಹೊಸನಗರ ಭಾಗದಲ್ಲಿ ಹೆಚ್ಚಿನ ಕೆಎಸ್‌ಆರ್‌ಟಿಸಿ ಬಸ್ ಓಡಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ಗ್ಯಾರಂಟಿ ಸಭೆಗಳನ್ನು ಆಯೋಜಿಸುವ ಬಗ್ಗೆ ಸಭೆ ತೀರ್ಮಾನಿಸಿತು.
ಸಭೆಯಲ್ಲಿ ಜಿಲ್ಲಾ ಸಮಿತಿ ಸದಸ್ಯ ಅಮೀರ್ ಹಂಜ, ತಾಲ್ಲೂಕು ಸಮಿತಿ ಸದಸ್ಯರಾದ ರವೀಂದ್ರ ಕೆರೆಹಳ್ಳಿ, ಸಿಂಥಿಯಾ ಸೆರಾವೊ, ಅಕ್ಷತಾ ನಾಗರಾಜ್, ಸುಮಂಗಲ ದೇವರಾಜ್, ಪೂರ್ಣಿಮಾ ಮೂರ್ತಿ ರಾವ್, ನರಸಿಂಹ ಪೂಜಾರಿ, ಅನಿಲ್ ಕುಮಾರ್ ಎನ್. ಟಿ, ಕರುಣಾಕರ ಹಾಗೂ ಸಮಿತಿ ಸದಸ್ಯ ಕಾರ್ಯದರ್ಶಿ, ತಾಲ್ಲೂಕು ಪಂಚಾಯಿತಿ ಇಓ ನರೇಂದ್ರ ಕುಮಾರ್, ಅನುಷ್ಠಾನ ಇಲಾಖಾ ಅಧಿಕಾರಿಗಳಾದ ಸಿಡಿಪಿಓ ಗಾಯತ್ರಿ ಕೆ.ಜೆ, ಆಹಾರ ಇಲಾಖೆ ನಿರೀಕ್ಷಕ ನಾಗರಾಜ್, ಸಾರಿಗೆ ಇಲಾಖೆ ಅಧಿಕಾರಿ, ಜಿಲ್ಲಾ ಉದ್ಯೋಗ ಅಧಿಕಾರಿ, ಮೆಸ್ಕಾಂ ಇಲಾಖಾಧಿಕಾರಿ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ, ವ್ಯವಸ್ಥಾಪಕ, ವಿಷಯ ನಿರ್ವಾಹಕ ಹಾಗೂ ತಾ.ಪಂ. ಸಿಬ್ಬಂದಿ ವರ್ಗದವರು ಸಭೆಯಲ್ಲಿ ಹಾಜರಿದ್ದರು.
ಕಾಮೆಂಟ್‌ಗಳಿಲ್ಲ