Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ನಾಳೆ ಹೊಸನಗರಕ್ಕೆ ಲೋಕಾಯುಕ್ತ ಅಧಿಕಾರಿಗಳು - ಸರ್ಕಾರಿ ನೌಕರರ ಕಾರ್ಯವೈಖರಿ ಬಗ್ಗೆ ದೂರುಗಳನ್ನು ನೀಡಲು ಸದವಕಾಶ

ಹೊಸನಗರ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಶಿವಮೊಗ್ಗ ಜಿಲ್ಲಾ ಅಧಿಕಾರಿಗಳು ಹೊಸನಗರ ತಾಲ್ಲೂಕು ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಈ ತಿಂಗಳು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕರಿಸಲು ಸಭೆ ನಡೆಸುತ್ತಿದ್ದು, ನಾಳೆ ಅಂದರೆ ಅಕ್ಟೋಬರ್‌ 23ರಂದು ಹೊಸನಗರಕ್ಕೆ ಭೇಟಿ ನೀಡಲಿದ್ದಾರೆ.

ನ್ಯೂಸ್‌ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ

ನಾಳೆ ಅಂದರೆ ಅಕ್ಟೋಬರ್‌ 23 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೊಸನಗರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ನಿಮ್ಮ ಅಹವಾಲನ್ನು ಸ್ವೀಕರಿಸಲಿದ್ದಾರೆ. 

ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ದಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ