Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಪಂಚಾಯತ್ ರಾಜ್ ಸಿಬ್ಬಂದಿಗಳ ಪ್ರತಿಭಟನೆಗೆ ಎಂ. ಗುಡ್ಡೇಕೊಪ್ಪ ಗ್ರಾ.ಪಂ. ಅಧ್ಯಕ್ಷ ಪ್ರವೀಣ ಜಿ .ಎನ್ ಹಾಗೂ ಸದಸ್ಯರಿಂದ ನೈತಿಕ ಬೆಂಬಲ

ಹೊಸನಗರ: ಗ್ರಾಮ ಪಂಚಾಯಿತಿ ಪಿಡಿಓಗಳಿಗೆ ತಾಂತ್ರಿಕ ಹುದ್ದೆಗೆ ನೀಡುವ ಸಮನಾದ ವೇತನ ಶ್ರೇಣಿ ನಿಗದಿ ಪಡಿಸಬೇಕು. ಸೇವಾ ವಿಷಯಗಳಿಗೆ ಸೂಕ್ತ ಸೌಲಭ್ಯಗಳಾದ ಸುಸಜ್ಜಿತ ಕಚೇರಿ, ಉತ್ತಮ ಪರಿಕರ, ಸಿಯುಜಿ ಸಿಮ್/ಡಾಟಾ ಹೊಂದಿದ ಮೊಬೈಲ್ ಫೋನ್, ಗೂಗಲ್ ಕ್ರೋಮ್ ಬುಕ್/ಟಾಪ್, ಪ್ರಿಂಟರ್, ಸ್ಕ್ಯಾನರ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿಕಾರಿ, ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಆದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ  ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಕಾಲ ಪ್ರತಿಭಟನೆಯಲ್ಲಿ ತಾಲ್ಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ವರ್ಗ ಭಾಗವಹಿಸುವ ಮೂಲಕ ನೈತಿಕ ಬೆಂಬಲ ಸೂಚಿಸಿದರು.

ಇಂದು ಪ್ರತಿಭಟನೆಯಲ್ಲಿ ಭಾಗವಹಿಸಿದ ಅಧ್ಯಕ್ಷ ಜಿ.ಎನ್. ಪ್ರವೀಣ ಪತ್ರಕರ್ತರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಪರವಾಗಿ ತಾವು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಗ್ರಾಮ ಪಂಚಾಯಿತಿ ಒಕ್ಕೂಟದ ಬೇಡಿಕೆಗಳು ನ್ಯಾಯ ಸಮ್ಮತವಾಗಿದ್ದು ಕೂಡಲೇ ಸರ್ಕಾರ ಈ ಕುರಿತು ಗಮನ ಹರಿಸಿ ಅಗತ್ಯ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು. ತಪ್ಪಿದಲ್ಲಿ ಪ್ರತಿಭಟನೆಯ ಕಿಚ್ಚು ಮುಂಬರುವ ದಿನಗಳಲ್ಲಿ ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಲಿದೆ ಎಂದು ಎಚ್ಚರಿಕೆ ನೀಡಿದರು.

CLICK ಮಾಡಿ - ಕೃಷಿ ಇಲಾಖೆಯಿಂದ ಕೆರೆಹಳ್ಳಿಯಲ್ಲಿ ಡ್ರೋಣ್ ಬಳಸಿ ನ್ಯಾನೋ ಯೂರಿಯ ಸಿಂಪಡಣೆ - ರೈತರಿಗೆ ಉಚಿತ ಪ್ರಾತ್ಯಕ್ಷಿಕೆ

ಈ ವೇಳೆ ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ರಾಘವೇಂದ್ರ, ಪಿಡಿಓ ರವಿ ಎಸ್, ಕಾರ್ಯದರ್ಶಿ ಯೋಗೇಶ್, ನೀರುಗಂಟಿ ಮೋಹನ್ ರಾಜ್, ಬಿಲ್ ಕಲೆಕ್ಟರ್ ಧರ್ಮಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ