Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರ ತಾಲ್ಲೂಕಿನ ಅಕ್ರಮ ಮರಳು ಸಾಗಾಟ ಕುರಿತು ವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಏನೇನಾಯಿತು?!

ಹೊಸನಗರ: ತಾಲ್ಲೂಕಿನಲ್ಲಿ ಅಕ್ರಮ ಮರಳು ಸಾಗಾಟ ಮಾಡುವ ವಾಹನಗಳನ್ನು ತಡೆಯಲು ಹೋಬಳಿವಾರು ತಂಡ ರಚಿಸಲು ಸಾಗರ ವಿಭಾಗಾಧಿಕಾರಿ ಯತೀಶ್ ಸೂಚಿಸಿದರು.

ನ್ಯೂಸ್‌ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ

ಇಂದು ವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆದ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮರಳು ಸಾಗಾಟದಲ್ಲಿ ನಿರತರಾಗಿರುವ ಉತ್ತರ ಪ್ರದೇಶ ಮೂಲದ ಕಾರ್ಮಿಕರನ್ನು ವಾಪಾಸ್‌ ಕಳುಹಿಸುವ ಬಗ್ಗೆ ಮಾನ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯ ಗಮನಕ್ಕೆ ತಂದರು.

CLICK ಮಾಡಿ - ಹೊಸನಗರದಲ್ಲಿ ಬಿಂದಾಸ್ಸಾಗಿ ಶರಾವತಿ ನದಿ ಒಡಲು ಬಗೆಯುತ್ತಿರುವ ಅಕ್ರಮ ಮರಳು ಸಂಗ್ರಹಕಾರರು - ಟಾಸ್ಕ್‌ ಫೋರ್ಸ್‌ ನಿರ್ಲಕ್ಷ್ಯಕ್ಕೆ ಮದ್ದು ಅರೆಯುವವರು ಯಾರು?!

ಈಗಾಗಲೇ ಹೊಸ ಮರಳು ನಿಯಮದಂತೆ 18 ಗ್ರಾಮ ಪಂಚಾಯಿತಿಗಳಲ್ಲಿ ಮರಳು ಎತ್ತಲು ಪರವಾನಿಗೆ ನೀಡಿದ್ದು, ಸದರಿ ಗ್ರಾಮ ಪಂಚಾಯಿತಿಗಳ ಮೂಲಕ ಅಧಿಕೃತವಾಗಿ ಸಾರ್ವಜನಿಕರಿಗೆ ಮರಳು ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಲು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನಲ್ಲಿ ಅವಧಿ ಮುಕ್ತಾಯ ಆಗಿರುವ ಮರಳು ಕ್ವಾರಿ ಲೀಸ್‌ಗಳನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಹಾಗೂ ಅಕ್ರಮ ಮರಳು ಸಾಗಾಟ ಮಾಡುವ ವಾಹನ ಮಾಲೀಕರಿಗೆ ಪ್ರಸ್ತುತ ವಿಧಿಸುತ್ತಿರುವ ದಂಡವನ್ನು ಹೆಚ್ಚಿಸಲು ಸೂಚನೆ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್ ರಶ್ಮಿ, ತಾಲ್ಲೂಕು ಪಂಚಾಯಿತಿ ಇಓ ನರೇಂದ್ರ ಕುಮಾರ್, ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್, ಭೂ ವಿಜ್ಞಾನಿ ಪ್ರಿಯ, ಲೋಕೋಪಯೋಗಿ ಇಲಾಖೆ ಅಭಿಯಂತರ ಸುನೀಲ್, ಕಂದಾಯ ನಿರೀಕ್ಷಕ ಅಫ್ರೋಜ್ ಸೈಯದ್, ಸಿಬ್ಬಂದಿಗಳಾದ ಸುರೇಶ್, ಚಿರಾಗ್  ಹಾಜರಿದ್ದರು.

ಕಾಮೆಂಟ್‌ಗಳಿಲ್ಲ