Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಬಾಳೇಬೈಲು ಸರ್ಕಾರಿ ಶಾಲೆಯ ವಿದ್ಯಾರ್ಥಿ ರೋಹನ್ ಜಿಲ್ಲಾ ಮಟ್ಟದ ಕ್ರೀಡಾಕೂಟ ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೊಸನಗರ : ಇತ್ತೀಚೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬಾಳೇಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಕುಮಾರ ರೋಹನ್ ಕೆ. ಅತ್ಯುತ್ತಮ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, 100 ಮತ್ತು 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಪ್ರತಿಭಾವಂತ ಕ್ರೀಡಾಪಟು ರೋಹನ್‌ ಕೆ. 14 ವರ್ಷ ವಯೋಮಿತಿಯೊಳಗಿನ ಶಿವಮೊಗ್ಗ ಜಿಲ್ಲಾ ಕ್ರಿಕೆಟ್ ತಂಡಕ್ಕೂ ಆಯ್ಕೆಯಾಗಿದ್ದಾನೆ.

ಬಾಳೆಬೈಲಿನ ನವಾಜ್ ಈತನಿಗೆ ತರಬೇತಿ ನೀಡಿದ್ದಾರೆ. ತಾಲ್ಲೂಕಿಗೆ ಕೀರ್ತಿ ತಂದಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿ ಬಾಳೇಬೈಲಿನ ಕಿರಣ್ ಮತ್ತು ಧನ್ಯ ದಂಪತಿಗಳ ಪುತ್ರ.

ಕಾಮೆಂಟ್‌ಗಳಿಲ್ಲ