Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮುಡಿಗೇರಿಸಿಕೊಂಡ ಮಸಗಲ್ಲಿ ವಿದ್ಯಾರ್ಥಿನಿ ಸ್ಫೂರ್ತಿ ರಾಜ್ಯಮಟ್ಟಕ್ಕೆ ಆಯ್ಕೆ

ಹೊಸನಗರ : ಶಿವಮೊಗ್ಗ ಮಹಾನಗರ ಪಾಲಿಕೆಯ ಪರಿಷತ್ ಸಭಾಭವನದಲ್ಲಿ ಅಕ್ಟೋಬರ್ ಐದರಂದು ನಡೆದ ಜಿಲ್ಲಾಮಟ್ಟದ ಯುವ ಸಂಸತ್‌ ಸ್ಪರ್ಧೆಯಲ್ಲಿ ಹೊಸನಗರ ತಾಲ್ಲೂಕು ಜೇನಿ ಗ್ರಾಮ ಪಂಚಾಯಿತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಕೆ.ಎನ್. ಸ್ಫೂರ್ತಿ ತನ್ನ ಪ್ರೌಢಿಮೆ ಪ್ರದರ್ಶಿಸಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕುಮಾರಿ ಸ್ಫೂರ್ತಿ ತಂದೆ ನಾಗರಾಜ ಹಾಗೂ ತಾಯಿ ನಾಗರತ್ನರವರ ಪುತ್ರಿಯಾಗಿದ್ದು, ಸ್ಫೂರ್ತಿಯ ಈ ಅಪ್ರತಿಮ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್. ಆರ್. ಕೃಷ್ಣಮೂರ್ತಿ, ಶಿಕ್ಷಣ ಸಮನ್ವಯಾಧಿಕಾರಿ ಎಂ. ರಂಗನಾಥ್, ಶಾಲೆಯ ಮುಖ್ಯ ಶಿಕ್ಷಕರಾದ ಬಿ.ಎನ್. ಪರಶುರಾಮಪ್ಪ, ಶಾಲಾ ಶಿಕ್ಷಕ ವೃಂದದವರು, ಪೋಷಕರು, ಶಾಲಾಭಿವೃದ್ಧಿ ಸಮಿತಿಯವರು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಕಾಮೆಂಟ್‌ಗಳಿಲ್ಲ