Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರದಲ್ಲಿ ಪ್ರಪ್ರಥಮ ಬಾರಿಗೆ ನವೆಂಬರ್‌‌‌ 12ರಂದು ಕುವೆಂಪು ವಿವಿ ಪುರುಷ ಮತ್ತು ಮಹಿಳೆಯರ ಗುಡ್ಡಗಾಡು ಓಟದ ಸ್ಪರ್ಧೆ

ಹೊಸನಗರ : ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನವೆಂಬರ್ 12ರ ಮಂಗಳವಾರ ಪ್ರಪ್ರಥಮ ಬಾರಿಗೆ ಕುವೆಂಪು ವಿಶ್ವವಿದ್ಯಾಲಯ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಗುಡ್ಡಗಾಡು ಓಟದ ಸ್ಪರ್ಧೆ ನಡೆಯಲಿದೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಿ. ಜಿ. ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಉಮೇಶ್ ಕೆ. ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸ್ಪರ್ಧೆಯ ಪುರುಷರ ತಂಡವನ್ನು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊಫೆಸರ್ ಹೆಚ್. ಎನ್. ಈಶ್ವರಪ್ಪ ಹಾಗೂ ಮಹಿಳಾ ತಂಡವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯೆ ಡಾ. ಕವಿತಾ ಪ್ರವೀಣ್ ಉದ್ಘಾಟಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರುಗಳು ಪಾಲ್ಗೊಳ್ಳಲಿದ್ದಾರೆ.

CLICK ಮಾಡಿ - ಮಾವಿನಕೊಪ್ಪದಲ್ಲಿ ಯಶಸ್ವಿಯಾಗಿ ನಡೆಯಿತು ಸಡಗರ ಸಂಭ್ರಮದ ಮಕ್ಕಳ ಹಬ್ಬ ಪ್ರತಿಭಾ ಕಾರಂಜಿ

ಮಂಗಳವಾರ ಬೆಳಗ್ಗೆ 7 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಸ್ಪರ್ಧಿಗಳು ಕಾಲೇಜು ಮುಂಭಾಗದಿಂದ ಕರಿನಗೊಳ್ಳಿ ಹೊಟ್ಕೆರೆ, ಗೇರುಪುರ ನೂತನ ಮೊರಾರ್ಜಿ ಶಾಲೆ ಮುಂಭಾಗದಿಂದ ಮಾವಿನಕೊಪ್ಪ ಮಾರ್ಗವಾಗಿ ಕಾಲೇಜು ಮುಂಭಾಗಕ್ಕೆ ಬಂದು ಒಟ್ಟು 10 ಕಿಲೋ ಮೀಟರ್ ದೂರವನ್ನು ಕ್ರಮಿಸಲಿದ್ದಾರೆ. ತದನಂತರ ಕ್ರೀಡಾ ಸಮಾರೋಪ ಸಮಾರಂಭ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆಯಲಿದ್ದು ಶಾಸಕರು, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣರವರು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮಾಡಲಿದ್ದಾರೆ.

ಕಾಮೆಂಟ್‌ಗಳಿಲ್ಲ