Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರ ತಾಲ್ಲೂಕು ಆಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದಿಂದ ಸಡಗರ ಸಂಭ್ರಮದ ಕನ್ನಡ ರಾಜ್ಯೋತ್ಸವ

ಹೊಸನಗರ : ಕನ್ನಡ ನಾಡಿನ ಭೌಗೋಳಿಕ ಏಕೀಕರಣಕ್ಕಾಗಿ ಸ್ವಾತಂತ್ರ ಪೂರ್ವದಿಂದಲೂ ಕನ್ನಡದ ಕಟ್ಟಾಳುಗಳು ಹೋರಾಟ ಮಾಡಿಕೊಂಡು ಬಂದಿದ್ದಾರೆ. ಕನ್ನಡ ನಾಡು, ನುಡಿ, ಸಾಂಸ್ಕೃತಿಕ ಪರಂಪರೆ ನೆನಪಿಸುವ ರಾಜ್ಯೋತ್ಸವ ನಮ್ಮೆಲ್ಲರ ನಾಡಹಬ್ಬವಾಗಿದ್ದು, ಈ ನಾಡಹಬ್ಬವನ್ನು ಎಲ್ಲಾ ಕನ್ನಡಿಗರು ಸಂಭ್ರಮಿಸುವಂತಾಗಬೇಕು ಎಂದು ತಹಶೀಲ್ದಾರ್ ರಶ್ಮಿ ಹೆಚ್. ಜೆ. ತಿಳಿಸಿದರು.

ಅವರು ಇಂದು ತಾಲ್ಲೂಕು ಆಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ಹೊಸನಗರದಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ದ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಸಮಿತಿ ಅಧ್ಯಕ್ಷ ತ.ಮ. ನರಸಿಂಹ ಮಾತನಾಡಿ, ಕನ್ನಡ ರಾಜ್ಯೋತ್ಸವ ಕನ್ನಡಿಗರನ್ನು ಜಾಗೃತಗೊಳಿಸುವ ಕಾರ್ಯಕ್ರಮವಾಗಿ ರೂಪುಗೊಳ್ಳಬೇಕು. ಕನ್ನಡತನವನ್ನು ಎಲ್ಲರೂ ರೂಢಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ತಾಲ್ಲೂಕು ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಸೊನಲೆ ಶ್ರೀನಿವಾಸ್ ಮಾತನಾಡಿ ಸಾಹಿತ್ಯಿಕ ಇತಿಹಾಸದಲ್ಲಿ ಕನ್ನಡ ನಾಡು ಬಹುವಿಸ್ತಾರ ಹೊಂದಿರುವುದನ್ನು ಉಲ್ಲೇಖಿಸಿ, ಕನ್ನಡ ಭಾಷೆಗೆ ವಿಶ್ವದಲ್ಲಿಯೇ ವಿಶೇಷ ಸ್ಥಾನಮಾನವಿದೆ ಎಂದರು.

CLICK ಮಾಡಿ - ತಾಲ್ಲೂಕು ಕ್ರೀಡಾಕ್ಷೇತ್ರದಲ್ಲಿ ಹೊಸ ಮಿಂಚು ಹರಿಸಿದ ಮಲೆನಾಡು ಪ್ರೌಢಶಾಲೆಯ ಅರ್ಚನಾ | 3000 ಮೀಟರ್ ಓಟದ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ 9ನೇ ತರಗತಿ ವಿದ್ಯಾರ್ಥಿನಿ

ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್. ಆರ್. ಕೃಷ್ಣಮೂರ್ತಿ ಈ ಸಂದರ್ಭದಲ್ಲಿ ಸ್ವರಚಿತ ಕವನವನ್ನು ವಾಚಿಸಿದರು. ವೇದಿಕೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ವೈ. ನರೇಂದ್ರ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಉಮೇಶ್ ಎಸ್ ಗುಡ್ಡದ್, ರಾಷ್ಟ್ರೀಯ ಹಬ್ಬಗಳ ಸಮಿತಿ ಸದಸ್ಯ ಶ್ರೀಧರ ಉಡುಪ, ವರ್ತಕರ ಸಂಘದ ಅಧ್ಯಕ್ಷ ವಿಜಯೇಂದ್ರ ಶೇಟ್ ಉಪಸ್ಥಿತರಿದ್ದರು. ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ನಾಗಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ತಾಲ್ಲೂಕು ಕಚೇರಿಯ ಹಿಂಭಾಗದ ಆವರಣದಲ್ಲಿರುವ ಕ.ಸಾ.ಪ ಕಚೇರಿ ಎದುರು ಕನ್ನಡ ಧ್ವಜಾರೋಹಣವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಸಮಿತಿ ಅಧ್ಯಕ್ಷರಾದ ತ.ಮ. ನರಸಿಂಹರವರು ನೆರವೇರಿಸಿದರು.

ಸಾರ್ವಜನಿಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹೊಸನಗರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ವಂದೇ ಮಾತರಂ ಗೀತೆ ಹಾಡಿದರೆ, ರಾಷ್ಟ್ರಗೀತೆಯನ್ನು ಕುವೆಂಪು ವಿದ್ಯಾಶಾಲೆ ವಿದ್ಯಾರ್ಥಿಗಳು ಹಾಡಿದರು. ನಾಡಗೀತೆಯನ್ನು ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಹಾಡಿದರು. ಗುರೂಜಿ ಪ್ರೌಢಶಾಲೆ ವಿದ್ಯಾರ್ಥಿಗಳು ರೈತ ಗೀತೆಯನ್ನು ಹಾಡಿದರು. 

ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಕೆ. ಬಾಲಚಂದ್ರ ರಾವ್ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಹೊಸನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ, ಮತ್ತು ಹೋಲಿ ರೆಡಿಮರ್ ಶಾಲೆ, ಕುವೆಂಪು ವಿದ್ಯಾ ಶಾಲೆ, ಮಲೆನಾಡು ಪ್ರೌಢಶಾಲೆ ಮಲೆನಾಡು ಪ್ರೌಢಶಾಲೆ, ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದ ನಿರ್ವಹಣಾ ಜವಾಬ್ದಾರಿಯನ್ನು ತಾಲ್ಲೂಕು ಕಚೇರಿಯ ಚಿರಾಗ್ ವರ್ಣೇಕರ್ ಮತ್ತು ಶಿಕ್ಷಕರಾದ ಸುಹಾಸ್, ರಾಜು ಶೆಟ್ಟಿ ಬಿ. ಎಂ, ಧನಂಜಯ ವಹಿಸಿದ್ದರು. ಡಾ. ಅಂಜಲಿ ಅಶ್ವಿನ್ ಕುಮಾರ್ ವಂದಿಸಿದರು.

ಕಾಮೆಂಟ್‌ಗಳಿಲ್ಲ