ಮಾವಿನಕೊಪ್ಪದಲ್ಲಿ ಯಶಸ್ವಿಯಾಗಿ ನಡೆಯಿತು ಸಡಗರ ಸಂಭ್ರಮದ ಮಕ್ಕಳ ಹಬ್ಬ ಪ್ರತಿಭಾ ಕಾರಂಜಿ
ಹೊಸನಗರ : ಪಟ್ಟಣದ ಮಾವಿನಕೊಪ್ಪದಲ್ಲಿ ಹದಿನೈದು ಶಾಲೆಗಳನ್ನು ಒಳಗೊಂಡ ಹೊಸನಗರ ಪಟ್ಟಣ ಕ್ಲಸ್ಟರ್ ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಾವಿನ ಕೊಪ್ಪದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಇಂದು ಯಶಸ್ವಿಯಾಗಿ ನಡೆಯಿತು.
ನ್ಯೂಸ್ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ
ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್. ಆರ್. ಕೃಷ್ಣಮೂರ್ತಿ ಮಾತನಾಡಿ, ಶಿಕ್ಷಣ ಇಲಾಖೆಯ ಮಹದುದ್ದೇಶದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳಲ್ಲಿನ ಪ್ರತಿಭಾ ಅನಾವರಣಕ್ಕೆ ಸೂಕ್ತ ವೇದಿಕೆಯಾಗಿದೆ. ಪ್ರತಿಭಾ ಕಾರಂಜಿಯಲ್ಲಿ ಅಭಿನಯ, ಗೀತೆ, ಮಿಮಿಕ್ರಿ, ಛದ್ಮವೇಷ, ಕನ್ನಡ, ಹಿಂದಿ, ಇಂಗ್ಲೀಷ್, ಉರ್ದು ಕಂಠಪಾಠ ಸ್ಪರ್ಧೆ, ಸಂಸ್ಕೃತ ಧಾರ್ಮಿಕ ಪಠಣ, ಭಕ್ತಿಗೀತೆ, ದೇಶಭಕ್ತಿ ಗೀತೆ, ಪ್ರಬಂಧ ರಚನೆ, ಕವನ ವಾಚನ, ಆಶುಭಾಷಣ ಸ್ಪರ್ಧೆ, ಕಥೆ ಹೇಳುವುದು, ಅರೇಬಿಕ್ ಧಾರ್ಮಿಕ ಪಠಣ ಸೇರಿದಂತೆ ವಿವಿಧ ಪ್ರಕಾರಗಳ ಸ್ಪರ್ಧೆಗಳಿಗೆ ಪ್ರತಿಭಾಕಾರಂಜಿಯಲ್ಲಿ ಅವಕಾಶ ಕಲ್ಪಿಸಿದ್ದು ಇದು ಶಿಕ್ಷಣಕ್ಕೆ ಪೂರಕವಾಗಿದೆ ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಜಾಜ್ ಗುರುರಾಜ್ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಉಪಾಧ್ಯಕ್ಷೆ ಸಹನಾ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಕುಮಾರ್, ಕಳೂರು ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷ ಡಿ. ಆರ್. ವಿನಯ್, ಲಯನ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಸ್ವರೂಪ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಗುಲಾಬಿ ಮರಿಯಪ್ಪ, ಸಿಆರ್‌ಪಿ ಮಂಜಪ್ಪ, ಕೆ. ಬಾಲಚಂದ್ರ ರಾವ್, ಶಾಸಕರ ಮಾದರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನೇರಲೆ ರಮೇಶ್, ಸತೀಶ, ಇಬ್ರಾಹಿಂ, ರಾಘವೇಂದ್ರ, ಲಿಲ್ಲಿ ಡಿಸೋಜಾ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಇದೇ ಶಾಲೆಯಲ್ಲಿ ಎಂಟು ವರ್ಷಗಳ ಕಾಲ ಬಡ್ತಿ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಆರ್. ಕುಬೇಂದ್ರಪ್ಪ ದಂಪತಿಗಳನ್ನು ಶಾಲು ಹೊದಿಸಿ ಸನ್ಮಾನಿಸಿ ಅವರ ಸೇವೆಯನ್ನು ಸ್ಮರಿಸಿದರು.
ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಸುರೇಶ್ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಕರಿಬಸಪ್ಪ ಪ್ರಾಸ್ತಾವಿಕ ಭಾಷಣ ಮಾಡಿದರು. ಸುಜಾತಾ ಕಾರ್ಯಕ್ರಮ ನಿರೂಪಿಸಿದರು.
ಕಾಮೆಂಟ್‌ಗಳಿಲ್ಲ