Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ನಿಧನ ವಾರ್ತೆ : ಸರಸ್ವತಿ ಕೃಷ್ಣಪ್ಪ

ಹೊಸನಗರ : ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಕೆಬಿಸಿ ಕೃಷ್ಣಪ್ಪನವರ ಧರ್ಮಪತ್ನಿ ಶ್ರೀಮತಿ ಸರಸ್ವತಿ ಕೃಷ್ಣಪ್ಪ (73)ರವರು ನವೆಬರ್ 15 ಶುಕ್ರವಾರ ಬೆಳಿಗ್ಗೆ 11.30ರ ಸಮಯದಲ್ಲಿ ತೀವ್ರ ಹೃದಯಾಘಾತಕ್ಕೀಡಾಗಿ ಕೊನೆಯುಸಿರೆಳೆದರು.

ಮೃತರು ಪತಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದು, ಇಂದು ಬೆಳಿಗ್ಗೆ ಅವರ ನಿವಾಸದ ಪಕ್ಕದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಸರಸ್ವತಿ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅಪಾರ ಬಂಧು ಬಳಗದವರು ಹಾಗೂ ಆಪ್ತರು ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದರು.


ಕಾಮೆಂಟ್‌ಗಳಿಲ್ಲ