Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಕುವೆಂಪು ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಕೊಡಚಾದ್ರಿ ಕಾಲೇಜ್ ಕ್ರೀಡಾಪಟುಗಳಿಂದ 2 ಚಿನ್ನ, 4 ಬೆಳ್ಳಿ, 2 ಕಂಚಿನ ಪದಕ ಬೇಟೆ

ಹೊಸನಗರ: ಶಿವಮೊಗ್ಗದ ಡಿವಿಎಸ್ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ, ಎರಡು ಚಿನ್ನ, ನಾಲ್ಕು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಳ್ಳುವ ಮೂಲಕ ಕಾಲೇಜಿನ ಕ್ರೀಡಾ ಪತಾಕೆಯನ್ನು ಎತ್ತರಕ್ಕೇರಿಸಿದರು.

ನ್ಯೂಸ್‌ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ

ಕ್ರೀಡಾಕೂಟದಲ್ಲಿ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಪುಷ್ಪ 10000 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಗಳಿಸಿದರೆ, 20 ಕಿಲೋ ಮೀಟರ್ ನಡಿಗೆ ಸ್ಪರ್ಧೆಯಲ್ಲಿ ಮಂದಾರ ಪ್ರಥಮ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡರು.

ಸಿಂಧು ಇಪ್ಪತ್ತು ಕಿಲೋಮೀಟರ್ ನಡಿಗೆ ಸ್ಪರ್ಧೆಯಲ್ಲಿ ಹಾಗೂ 21 ಕಿ.ಮೀ ಮ್ಯಾರಥಾನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು.

CLICK ಮಾಡಿ - ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ ಬಿ.ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಾಗಾರ

ಪುರುಷರ ವಿಭಾಗದ 21 ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಶಶಾಂಕ್ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕ ಪಡೆದರೆ, ಅರ್ಷಿತ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಸ್ಥಾನ ಗಳಿಸಿ ರಜತ ಪದಕ ತಮ್ಮದಾಗಿಸಿಕೊಂಡರು. 20 ಕಿಲೋಮೀಟರ್‌ ನಡಿಗೆ ಸ್ಪರ್ಧೆಯಲ್ಲಿ ಉಲ್ಲಾಸ್ ತೃತೀಯ ಸ್ಥಾನವನ್ನು ಹಾಗೂ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಶಬರೀಶ್ ತೃತೀಯ ಸ್ಥಾನ ಗಳಿಸುವ ಮೂಲಕ ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡರು.

ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯವರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಕಾಮೆಂಟ್‌ಗಳಿಲ್ಲ