ಗೇರುಪುರ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ
ಹೊಸನಗರ : ಇಲ್ಲಿನ ಗೇರುಪುರ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ ಹಾಗೂ ಹೊಸನಗರ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನಿನ್ನೆ ಅಂತಾರಾಷ್ಟ್ರೀಯ ವಿಕಲ ಚೇತನರ ದಿನ, ವಿಶ್ವ ಮಾನವ ಹಕ್ಕುಗಳ ದಿನ ಹಾಗೂ ರಾಷ್ಟ್ರೀಯ ಗ್ರಾಹಕರ ದಿನದ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.
ನ್ಯೂಸ್ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ
ಹೊಸನಗರ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ವ್ಯವಹಾರ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಫಾರೂಖ್ ಝಾರೆ ಇವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾನೂನಿನ ಮಹತ್ವವನ್ನು ತಿಳಿಸಿಕೊಡುವುದರೊಂದಿಗೆ, ಕಾನೂನಿನ ಬಗ್ಗೆ ಅರಿವು ಮೂಡಿಸಲಾಯಿತು.
ವಸತಿ ಶಾಲೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಎಂ. ಪಿ. ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೊಸನಗರ ವಕೀಲರ ಸಂಘದ ಅಧ್ಯಕ್ಷರಾದ ಚಂದ್ರಪ್ಪ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಹೆಚ್.ಪಿ. ನಂಜುಂಡಪ್ಪ ಹಾಗೂ ವೈ. ಪಿ. ಮಹೇಶ್ ಅವರು ಕಾನೂನಿನ ಕುರಿತು ಉಪನ್ಯಾಸ ನೀಡಿದರು.
CLICK ಮಾಡಿ - ಕಾರಣಗಿರಿ ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಭೇಟಿ
ಕಾರ್ಯಕ್ರಮದಲ್ಲಿ ವಸತಿ ಶಾಲೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಕ್ಷಕರಾದ ಸಂತೋಷ್ ಎನ್. ಕೆ. ಸ್ವಾಗತಿಸಿದರು. ಜಗದೀಶ್ .ಹೆಚ್ ವಂದಿಸಿದರು. ಮಂಜುನಾಥ್ ಬಿ. ನಿರೂಪಿಸಿದರು.
ಕಾಮೆಂಟ್‌ಗಳಿಲ್ಲ