Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಮುಂಬಾರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಎನ್. ಕುಮಾರ್ ಅವಿರೋಧ ಆಯ್ಕೆ

ಹೊಸನಗರ : ತಾಲ್ಲೂಕಿನ ಮುಂಬಾರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್. ಕುಮಾರ್ ಅವಿರೋಧ ಆಯ್ಕೆಯಾದರು.

ಮುಂಬಾರು ಕ್ಷೇತ್ರದ ಸದಸ್ಯರಾಗಿ ಚುನಾಯಿತರಾಗಿದ್ದ ಎನ್. ಕುಮಾರ್ ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಚುನಾವಣಾ ಅಧಿಕಾರಿ ತಾಲ್ಲೂಕು ಪಶುಸಂಗೋಪನೆ ಇಲಾಖೆಯ ಆಡಳಿತ ವೈದ್ಯಾಧಿಕಾರಿ ಡಾ. ನಟರಾಜ್ ನೂತನ ಅಧ್ಯಕ್ಷರ ಆಯ್ಕೆಯನ್ನು ಪ್ರಕಟಿಸಿದರು.

ಒಟ್ಟು 8 ಸದಸ್ಯ ಬಲದ ಈ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಐದು ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

CLICK ಮಾಡಿ - ಗೇರುಪುರ ಇಂದಿರಾ ವಸತಿ ಶಾಲೆಯಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

ಆಯ್ಕೆ ಪ್ರಕ್ರಿಯೆ ಘೋಷಣೆ ಬಳಿಕ ನೂತನ ಅಧ್ಯಕ್ಷ ಎನ್. ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ರಸ್ತೆ, ವಿದ್ಯುತ್, ವಾಸ್ತವ್ಯಕ್ಕೆ ಮನೆ ಸೇರಿದಂತೆ ವಿವಿಧ ಮೂಲ ಸೌಲಭ್ಯ ಕಲ್ಪಿಸಲು ಮೊದಲು ಆದ್ಯತೆ ನೀಡುತ್ತೇನೆ. ಪಕ್ಷ ಬೇಧವಿಲ್ಲದೆ ಗ್ರಾಮಸ್ಥರ ಪರವಾಗಿ ಕಾರ್ಯ ನಿರ್ವಹಿಸುತ್ತೇನೆ. ನನಗೆ ಅಧ್ಯಕ್ಷ ಸ್ಥಾನ ಲಭಿಸಲು ಕಾರಣೀಭೂತರಾದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ಕಾಂಗ್ರೆಸ್ ಪಕ್ಷದ ವಿವಿಧ ಮುಖಂಡರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ, ಸದಸ್ಯರಾದ ಮಾಲತಿ ಜೆ. ಸುವರ್ಣ, ಅನ್ನಪೂರ್ಣ, ಶಾಸಕರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ, ಗ್ರಾಮದ ಪ್ರಮುಖರಾದ ಕೃಷ್ಣಮೂರ್ತಿ, ತಿಮ್ಮಪ್ಪ, ಲೋಕ ನಾಯಕ್, ಚಂದ್ರಶೇಖರ್, ಲೇಖನ್ ಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ