Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾದ ಹೊಸನಗರದ ವಿದ್ಯಾರ್ಥಿ ನಿರಂಜನ್‌ ಮತ್ತು ಕೆ.ಪಿ. ಅನೂಪ್‌

ಹೊಸನಗರ : ಶಿವಮೊಗ್ಗದಲ್ಲಿ ನಿನ್ನೆ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಧಾರ್ಮಿಕ ಪಠಣ ಭಗವದ್ಗೀತಾ ಸ್ಪರ್ಧೆಯಲ್ಲಿ ಪಟ್ಟಣದ ನಿರಂಜನ್. ವಿ. ಸುಧಾಕರ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ನಿರಂಜನ್‌ ತಾಲ್ಲೂಕಿನ ಕೋಡೂರಿನ ಬ್ಲಾಸಮ್ ಅಕಾಡೆಮಿ ಇಂಗ್ಲೀಷ್‌ ಮೀಡಿಯಂ ಸ್ಕೂಲಿನಲ್ಲಿ ಐದನೇ ತರಗತಿಯಲ್ಲಿ ಓದುತ್ತಿದ್ದು, ಇವನ ಈ ಸಾಧನೆಗೆ ಬ್ಲಾಸಮ್ ಅಕಾಡೆಮಿಯ ಅಧ್ಯಕ್ಷರು, ಮುಖ್ಯಸ್ಥರು, ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

ನಿರಂಜನ್‌ ಈಗಾಗಲೇ ಕರಾಟೆಯಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದರೆ, ಯಕ್ಷಗಾನ, ಡ್ರಾಯಿಂಗ್, ಕ್ಲೇ ಮಾಡೆಲಿಂಗ್, ಅಬಾಕಸ್, ಯೋಗ, ಸಂಗೀತ ಭಜನೆ, ಭಾಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾನೆ.ಹೊಸನಗರದ ಸ್ವಾಮಿ ವಿವೇಕಾನಂದ ಯೋಗ ಕೇಂದ್ರದಲ್ಲಿ ಯೋಗ, ಶ್ರೀ ರಾಮಕೃಷ್ಣ ಕೃಪಾಫೋಷಿತ ಯಕ್ಷ ವೃಂದದಲ್ಲಿ ಯಕ್ಷಗಾನ, ಶ್ರೀರಾಮಕೃಷ್ಣ ಶ್ರೀಮಾತಾ ಭಜನಾ ವೃಂದದಲ್ಲಿ ಭಜನೆ ತರಗತಿಗಳಲ್ಲಿ ಸಕ್ರಿಯವಾಗಿರುವ ನಿರಂಜನ್‌ ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ತಾಲ್ಲೂಕಿನ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೇರಿಸಲಿ ಎನ್ನುವುದು ಎಲ್ಲರ ಹಾರೈಕೆಯಾಗಿದೆ. 

ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಹೊಸನಗರದ ವಿದ್ಯಾರ್ಥಿ ಕೆ. ಪಿ. ಅನೂಪ್

ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಲಯದ ಆರನೇ ತರಗತಿ ವಿದ್ಯಾರ್ಥಿ ಕೆ.ಪಿ. ಅನೂಪ್ ಶಿವಮೊಗ್ಗದ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಹಿರಿಯ ಪ್ರಾಥಮಿಕ ವಿಭಾಗದ ಕಥೆ ಹೇಳುವ ಸ್ಪರ್ಧೆಯಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಗಳಿಸಿದ್ದಾನೆ.

ಅನೂಪ್ ಓದಿನೊಂದಿಗೆ ಕಥೆ, ಕವನ ವಾಚನ, ನಟನೆ ಸೇರಿದಂತೆ ಹಲವು ಸಾಂಸ್ಕೃತಿಕ ವಿಭಾಗಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು, ಈತ ಶಿಕ್ಷಣ ಇಲಾಖೆಯ ಹೆಚ್. ಕೆ. ಪ್ರದೀಪ್ ಹಾಗೂ ಆರೋಗ್ಯ ಇಲಾಖೆಯ ಅನುಸೂಯ ದಂಪತಿಗಳ ಪುತ್ರನಾಗಿದ್ದಾನೆ.

CLICK ಮಾಡಿ - ಹುಂಚ ನವೋದಯ ಪರೀಕ್ಷೆ ಉಚಿತ ತರಬೇತಿ ಶಿಬಿರದ ಮಕ್ಕಳ ಅಪರೂಪದ ಶೈಕ್ಷಣಿಕ ಪ್ರವಾಸ ಮತ್ತು ನವೋದಯ ವಿದ್ಯಾರ್ಥಿಗಳೊಂದಿಗೆ ಸಂವಾದ

ಅನೂಪ್ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ವಿದ್ಯಾರ್ಥಿವೃಂದದವರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ಶಾಲಾ ಅಭಿವೃದ್ಧಿ ಸಮಿತಿಯವರು ಅಭಿನಂದಿಸಿದ್ದಾರೆ.

ಕಾಮೆಂಟ್‌ಗಳಿಲ್ಲ