Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಕಾರಣಗಿರಿಯಲ್ಲಿ ಯಶಸ್ವಿಯಾಗಿ ನಡೆಯಿತು ಭಾರತ್ ಸ್ಕೌಟ್ಸ್‌‌ ಮತ್ತು ಗೈಡ್ಸ್‌ ಪುನಶ್ಚೇತನ ಕಾರ್ಯಾಗಾರ

ಹೊಸನಗರ :  ಭಾರತ್ ಸ್ಕೌಟ್ಸ್‌‌ ಮತ್ತು ಗೈಡ್ಸ್‌ ಸಂಸ್ಥೆಯ ಪುನಶ್ಚೇತನ ಕಾರ್ಯಾಗಾರ ತಾಲ್ಲೂಕಿನ ಕಾರಣಗಿರಿಯ ಶ್ರೀ ಸಿದ್ಧಿವಿನಾಯಕ ಸಭಾಭವನದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು.

ಶಿವಮೊಗ್ಗ ಜಿಲ್ಲಾ ಸಂಸ್ಥೆಯ ಆಶಯದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಅದರಂತೆ ಹೊಸನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಕಬ್ಸ್ /ಬುಲ್ ಬುಲ್ಸ್/ ಸ್ಕೌಟ್ಸ್/ ಗೈಡ್ಸ್‌‌ಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. 

ಹೊಸನಗರದ ಭಾರತ ಸ್ಕೌಟ್ಸ್‌ ಅಂಡ್ ಗೈಡ್ಸ್‌ನ ಕಾರ್ಯಾಧ್ಯಕ್ಷರೂ ಆಗಿರುವ ಬಿಇಓ ಕೃಷ್ಣಮೂರ್ತಿ ಹೆಚ್.ಆರ್ ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಎಲ್ಲಾ ವಿಭಾಗಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸರ್ವತೋಮುಖ ಬೆಳವಣಿಗೆ ಹೊಂದಬೇಕಾದಲ್ಲಿ ಸ್ಕೌಟ್ಸ್‌‌ ಮತ್ತು ಗೈಡ್ಸ್ ಚಳುವಳಿಯಲ್ಲಿ ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದು ಬಹಳ ಮುಖ್ಯವಾದ ಸಂಗತಿಯಾಗಿದೆ ಎಂದರು ಹೇಳಿದರು.

CLICK ಮಾಡಿ - ಹೊಸನಗರ ಗಣಪತಿ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿ ಅಂಗವಾಗಿ ಗಮಕ ವಾಚನ-ವ್ಯಾಖ್ಯಾನ ಕಾರ್ಯಕ್ರಮ

ತಾಲ್ಲೂಕಿನ ದೈಹಿಕ ಶಿಕ್ಷಣ ಸಂಯೋಜಕರಾದ ಬಾಲಚಂದ್ರ ರಾವ್ ಅವರು ಮಾತನಾಡಿ, ಮಕ್ಕಳೆಲ್ಲರೂ ಸರ್ವತೋಮುಖ ಬೆಳವಣಿಗೆ ಹೊಂದಬೇಕು. ಎಲ್ಲಾ ಕಾರ್ಯಕ್ರಮಗಳಲ್ಲಿ ಹೆಚ್ಚಿನ ರೀತಿಯಲ್ಲಿ ಭಾಗವಹಿಸುವುದು ತಮ್ಮೆಲ್ಲರ ಜವಾಬ್ದಾರಿಯಾಗಿದೆ. ಎಲ್ಲ ವಿಧವಾದ ತರಬೇತಿಯನ್ನು ಪಡೆದುಕೊಂಡು ಸಮಾಜದ ಉತ್ತಮ ವ್ಯಕ್ತಿಗಳಾಗಿ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಮಕ್ಕಳಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮುಖ್ಯ ಶಿಕ್ಷಕರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸೋಮಶೇಖರ ಬಿ.ಪಿ ಅವರು, ವಿದ್ಯಾರ್ಥಿಗಳು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗುವುದರಿಂದ ವಿದ್ಯಾರ್ಥಿಗಳಲ್ಲಿ ಸಾಹಸ, ಧೈರ್ಯದ ಪ್ರವೃತ್ತಿ ಹೆಚ್ಚುತ್ತದೆ. ಜೀವನೋತ್ಸಾಹ ಹೆಚ್ಚುತ್ತದೆ. ಸಮಾಜ ಸೇವೆ ಮಾಡುವ ಗುಣ ಹೆಚ್ಚುತ್ತದೆ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ರಂಗನಾಥ, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಜಗದೀಶ್ ಕಾಗಿನಲ್ಲಿ, ಶಿಕ್ಷಣ ಸಂಯೋಜಕ ಕರಿಬಸಪ್ಪ, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ವಿನಯ ಹೆಗಡೆ, ಖಜಾಂಚಿ ಧರ್ಮಪ್ಪ, ಜಿಲ್ಲಾ ಸಂಸ್ಥೆಯ ಜಿಲ್ಲಾ ಸಂಸ್ಥೆಯ ಜಿಲ್ಲಾ ತರಬೇತಿ ಆಯುಕ್ತ ಹೆಚ್. ಶಿವಶಂಕರಪ್ಪ, ಜಿಲ್ಲಾ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಸಿ.ಎಂ. ಪರಮೇಶ್ವರಯ್ಯ ಭಾಗವಹಿಸಿದ್ದರು.

ಒಟ್ಟು 80 ವಿದ್ಯಾರ್ಥಿ-ವಿದ್ಯಾರ್ಥಿನಿಯರು ವಿವಿಧ ವಿಭಾಗಗಳಾದ ಕಬ್ಸ್/ಬುಲ್ ಬುಲ್ಸ್/ ಸ್ಕೌಟ್ಸ್/ ಗೈಡ್ಸ್/ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದಿಂದ ಭಾಗವಹಿಸಿದ್ದರು. ಕಬ್ಸ್/ ಬುಲ್ಬುಲ್ಸ್/ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಹೆಚ್‌‌. ಶಿವಶಂಕರಪ್ಪ, ಸಿ.ಎಂ. ಪರಮೇಶ್ವರಯ್ಯ ಮಾಹಿತಿಯನ್ನು ನೀಡಿದರು.ಮಂಜುನಾಥ ಹೋಲಿ ರೀಢಿಮರ್ ಶಾಲೆ ವಂದನಾರ್ಪಣೆ ಕಾರ್ಯಕ್ರಮವನ್ನು ನೆರವೇರಿಸಿದರು.

ಕಾರ್ಯಕ್ರಮದ ಉದ್ದೇಶ ಕುರಿತು ವಿನಯ ಹೆಗಡೆ ಪ್ರಸ್ತಾಪಿಸಿದರು. ಧರ್ಮಪ್ಪ ನಿರೂಪಿಸಿದರು. ಹೋಲಿ ರಿಢೀಮರ್ ಶಾಲೆಯ ಮಂಜುನಾಥ ವಂದಿಸಿದರು. 

ಕಾಮೆಂಟ್‌ಗಳಿಲ್ಲ