Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರದಲ್ಲಿ ಹೊಸ ವರ್ಷದ ಮೊದಲ ದಿನವೇ ದುರಂತ : ಬೈಕ್ ಅಪಘಾತದಲ್ಲಿ ಪತಿಯ ದುರಂತ ಸಾ*ವು-ಸುದ್ದಿ ತಿಳಿದ ಪತ್ನಿಯೂ ನೇಣಿಗೆ ಶರಣು

ಹೊಸನಗರ : ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ಸುತ್ತ ಗ್ರಾಮದ ಕಿಳ್ಳೆಕ್ಯಾತರ ಕ್ಯಾಂಪಿನ ಮಂಜುನಾಥ ಬೈಕ್ ಅಪಘಾತದಲ್ಲಿ ಮೃತಪಟ್ಟ ಸುದ್ದಿ ತಿಳಿದ ಪತ್ನಿ ಹೊಸ ವರ್ಷದ ಮೊದಲ ದಿನವೇ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರಂತ ನಡೆದಿದೆ.

ನ್ಯೂಸ್‌ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ

25ರ ಹರೆಯದ ಮಂಜುನಾಥ ಡಿಸೆಂಬರ್ 31ರ ಸಂಜೆ ಕೆಲಸದ ನಿಮಿತ್ತ ಬೈಕಿನಲ್ಲಿ ಶಿಕಾರಿಪುರಕ್ಕೆ ಹೋಗಿದ್ದು, ಶಿಕಾರಿಪುರದ ಬಳಿ ಬೈಕ್  ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಹೊಸ ವರ್ಷದ ಬೆಳಿಗ್ಗೆ 9.30ರ ಸಮಯದಲ್ಲಿ ಮೃತಪಟ್ಟಿದ್ದರು. ಅಪಘಾತದಲ್ಲಿ ಗಾಯಗೊಂಡ ಮಂಜುನಾಥ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಅವರ ಪತ್ನಿ 21ರ ಹರೆಯದ ಅಮೃತ ಮನೆ ಶೆಡ್ಡಿನ ಜಂತಿಗೆ ತನ್ನ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

CLICK ಮಾಡಿ - ನಾಗರಕೊಡಿಗೆಯಲ್ಲಿ ಹೊಸನಗರ ತಾಲ್ಲೂಕು ಕಸಾಪದಿಂದ ಯಶಸ್ವಿಯಾಗಿ ನಡೆಯಿತು ಮನೆ ಮನೆಯಂಗಳದಲ್ಲಿ ಸಾಹಿತ್ಯ ಕಾರ್ಯಕ್ರಮದ ಮೊದಲ ಹೆಜ್ಜೆ

ಸುದ್ದಿ ತಿಳಿದ ತಕ್ಷಣ ಹೊಸನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ಕ್ರಮ ಜರುಗಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮೈಸೂರು ನಿವಾಸಿಯಾಗಿದ್ದ ಅಮೃತರನ್ನು ಮಂಜುನಾಥ ಪ್ರೇಮಿಸಿ, ಕೊಲ್ಲೂರಿನಲ್ಲಿ ವಿವಾಹವಾಗಿದ್ದರು ಎಂದು ಕುಟುಂಬದ ಆಪ್ತಮೂಲಗಳು ತಿಳಿಸಿವೆ.

ಕಾಮೆಂಟ್‌ಗಳಿಲ್ಲ