Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರದಲ್ಲಿ 76ನೇ ಗಣರಾಜ್ಯೋತ್ಸವ - ಸಂವಿಧಾನದ ಆಶಯಗಳಿಗೆ ಚ್ಯುತಿ ಬಾರದಂತೆ ನಡೆದುಕೊಳ್ಳಿ : ತಹಶೀಲ್ದಾರ್ ರಶ್ಮಿ ಹೆಚ್‌.ಜೆ ಕಿವಿಮಾತು

ಹೊಸನಗರ : ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ್ರ ಭಾರತ. ನಮ್ಮ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರೀಕನಿಗೆ ಮೂಲಭೂತ ಹಕ್ಕುಗಳ ಜೊತೆಜೊತೆಗೆ ಒಂದಿಷ್ಟು ಕರ್ತವ್ಯಗಳನ್ನು ನೀಡಿದೆ. ಅವುಗಳಿಗೆ ಚ್ಯುತಿ ಬಾರದಂತೆ ನಡೆದುಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಹಶೀಲ್ದಾರ್ ರಶ್ಮಿ ಹೆಚ್‌.ಜೆ ತಿಳಿಸಿದರು.

ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಏರ್ಪಡಿಸಿದ್ದ 76ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಕಾಲಾನುಸಾರ ಕಾಯ್ದೆಗಳ ತಿದ್ದುಪಡಿಗೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ದೇಶದ ಕಾನೂನು, ಕಾಯ್ದೆಗಳನ್ನು ಗೌರವಿಸುವ ಮುನ್ನ ವಿಶ್ವದ ಬೇರೆ ರಾಷ್ಟ್ರಗಳ ಕಾನೂನು ಕಟ್ಟಳೆ ಕುರಿತು ನಾವೆಲ್ಲ ಮೊದಲು ತಿಳಿಯಬೇಕು. ಸಂವಿಧಾನದಿಂದ ನಾವೆಲ್ಲಾ ಸರ್ವ ಸ್ವತಂತ್ರ್ಯರಾಗಿದ್ದು ನಮ್ಮ ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವಕ್ಕೆ ಬಹುಮುಖಿ ಮಹತ್ವವಿದೆ. ಕಾರಣ, ದೇಶದ ಸರ್ವೋಚ್ಛ ಕಾನೂನಾದ ಸಂವಿಧಾನ ಕುರಿತು ನಮ್ಮ ಹಿರಿಯರು ಆಳವಾದ ಅಧ್ಯಯನದ ಬಳಿಕ ಜಾರಿಗೊಳಿಸಿದ್ದಾರೆ. ಸಂವಿಧಾನವು ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರಜಾಸತ್ತಾತ್ಮಕ ಆದರ್ಶಗಳಿಗೆ ಮಾನ್ಯತೆ ನೀಡಿದೆ ಎಂದರು.

ಇದಕ್ಕೂ ಮೊದಲು ವಿವಿಧ ಶಾಲಾ ವಿದ್ಯಾರ್ಥಿಗಳು, ಪೊಲೀಸ್ ಹಾಗೂ ಗೃಹ ಇಲಾಖೆ ಪ್ಲಟೂನ್‌ಗಳು ಆರ್ಕರ್ಷಕ ಪಥ ಸಂಚಲನದ ಮೂಲಕ ರಾಷ್ಟ್ರ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.

CLICK ಮಾಡಿ - ಮೇಲಿನಬೆಸಿಗೆ ಸರ್ಕಾರಿ ಪ್ರೌಢಶಾಲೆಗೆ ಉಜ್ಜೀವನ್ ಮೈಕ್ರೊ ಬ್ಯಾಂಕಿಂಗ್ ಸಂಸ್ಥೆಯಿಂದ 10 ಲಕ್ಷ ಮೊತ್ತದ ಉಚಿತ ಗ್ರಂಥಾಲಯ - ಶೌಚಾಲಯ ಕಟ್ಟಡ ಕೊಡುಗೆ - ಸ್ಥಳೀಯರ ಪ್ರಶಂಸೆ

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಮಕ್ಕಳಿಂದ ಹಲವು ಮನರಂಜನೆ ಕಾರ್ಯಕ್ರಮಗಳು ಜರುಗಿದವು.

ಅಗ್ನಿ ಅವಘಡದ ಸಂದರ್ಭದಲ್ಲಿ ಮುಂಜಾಗ್ರತೆ ಕುರಿತಂತೆ ಜನತೆ ಕೈಗೊಳ್ಳಬೇಕಾದ ಕ್ರಮಗಳನ್ನು ಅಗ್ನಿಶಾಮಕ ದಳ ಇಲಾಖೆ ಸಿಬ್ಬಂದಿಗಳು ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ಮೂಲಕ ತೋರ್ಪಡಿಸಿದರು.

ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗಪ್ಪ, ಉಪಾಧ್ಯಕ್ಷೆ ಚಂದ್ರಕಲಾ, ಸದಸ್ಯರಾದ ಅಶ್ವಿನಿ ಕುಮಾರ್, ಕೃಷ್ಣವೇಣಿ, ಗಾಯತ್ರಿ, ಬಿಇಓ ಹೆಚ್.ಆರ್. ಕೃಷ್ಣಮೂರ್ತಿ, ಇಓ ನರೇಂದ್ರ ಕುಮಾರ್, ಸಿಪಿಐ ಗುರಣ್ಣ ಎಸ್. ಹೆಬ್ಬಾಳ್, ಪಿಎಸ್‌ಐ ಶಂಕರಗೌಡ ಪಾಟೀಲ, ಸಿಂಥಿಯಾ, ಗುಲಾಬಿ, ನೇತ್ರಾವತಿ ಭಟ್, ಅಬಕಾರಿ ನಿರೀಕ್ಷಕ ನಾಗರಾಜ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಬಂಡಿ ಸೋಮಶೇಖರ್, ರಾಷ್ಟ್ರೀಯ ಹಬ್ಬಗಳ ಸಮಿತಿ ಸದಸ್ಯರಾದ ಶ್ರೀಧರ ಉಡುಪ, ಶ್ರೀನಿವಾಸ್ ಕಾಮತ್, ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೇಟ್, ಆಶ್ರಯ ಸಮಿತಿ ಸದಸ್ಯೆ ರಾಧಿಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಿಕ್ಷಕರಾದ ಡಾ. ಅಂಜಲಿ ಅಶ್ವಿನಿ ಕುಮಾರ್ ಹಾಗೂ ಧನಂಜಯ ಕಾರ್ಯಕ್ರಮ ನಿರೂಪಿಸಿದರು. ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರರಾವ್ ವಂದಿಸಿದರು.

ಕಾಮೆಂಟ್‌ಗಳಿಲ್ಲ