ಕಾರಣಗಿರಿಯ ತೊಗರೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸದಸ್ಯರಿಗೆ ಸಸಿ ವಿತರಣೆ
ಹೊಸನಗರ : ತಾಲ್ಲೂಕಿನ ಕಾರಣಗಿರಿ ವಲಯ ತೊಗರೆ ಕಾರ್ಯಕ್ಷೇತ್ರದ ಯಶಸ್ವಿನಿ ಜ್ಞಾನ ವಿಕಾಸ ಕೇಂದ್ರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್‌ನ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಕೇಂದ್ರದ ಸದಸ್ಯರಿಗೆ ಇತ್ತೀಚೆಗೆ ಸಸಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ನ್ಯೂಸ್ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ
ಕೇಂದ್ರದ ಸದಸ್ಯರಾದ ಪವಿತ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಪ್ರದೀಪ್, ಕಾರ್ಯಕ್ರಮದ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿ, ಸದಸ್ಯರಿಗೆ ಸಾಂಕೇತಿಕವಾಗಿ ಸಸಿ ವಿತರಣೆ ಮಾಡಿದರು.
ತಾಲ್ಲೂಕು ತೋಟಗಾರಿಕೆ ಇಲಾಖೆಯ ಸಹ ನಿರ್ದೇಶಕರಾದ ಕರಿಬಸವ, ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಕಾಳು ಮೆಣಸಿನ ಕೃಷಿ, ಅಡಿಕೆ ಸಂರಕ್ಷಣೆ ವಿಧಾನಗಳು ಮತ್ತು ಪರಿಹಾರ ಹಾಗೂ ಮಣ್ಣು ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.
CLICK ಮಾಡಿ - ಹೊಸನಗರ ಪಟ್ಟಣ ಪಂಚಾಯಿತಿ ಬಜೆಟ್ ಪೂರ್ವಭಾವಿ ಸಭೆ
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ದೇವೇಂದ್ರಪ್ಪ, ಕಾರ್ಯದರ್ಶಿ ಜಯಂತ್ ಸೇರಿದಂತೆ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಹಾಗೂ ಸೇವಾ ಪ್ರತಿನಿಧಿಗಳು, ಕೇಂದ್ರದ ಸದಸ್ಯರು ಭಾಗವಹಿಸಿದ್ದರು.
ಕಾಮೆಂಟ್‌ಗಳಿಲ್ಲ