ಕೆಂಚನಾಲದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯಶಸ್ವಿ 3 ತಿಂಗಳ ಹೊಲಿಗೆ ತರಬೇತಿ ಕಾರ್ಯಕ್ರಮ
ಹೊಸನಗರ : ತಾಲ್ಲೂಕಿನ ರಿಪ್ಪನ್‌ಪೇಟೆ ವಲಯ ಕೆಂಚನಾಲ ಕಾರ್ಯಕ್ಷೇತ್ರದ ಮಾರಿಕಾಂಬಾ ಹಾಗೂ ಕಾವೇರಿ ಜ್ಞಾನ ವಿಕಾಸ ಕೇಂದ್ರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮೂರು ತಿಂಗಳ ಕಾಲ ಹೊಲಿಗೆ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿತು.
ಇತ್ತೀಚೆಗೆ ನಡೆದ ತರಬೇತಿಯ ಸಮಾರೋಪ ಸಮಾರಂಭವನ್ನು ತಾಲ್ಲೂಕು ಯೋಜನಾಧಿಕಾರಿ ಪ್ರದೀಪ್ ಉದ್ಘಾಟನೆ ಮಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲ ಕಾರ್ಯಕ್ರಮದ ಬಗ್ಗೆ ಹಾಗೂ ಮಹಿಳೆಯರು ಸ್ವ ಉದ್ಯೋಗವನ್ನು ಮಾಡುವುದರಿಂದ ಹೇಗೆ ಸ್ವಾವಲಂಬಿಗಳಾಗಿ ಬದುಕಬಹುದು ಎಂದು ವಿವರಿಸಿದರು.
ಕೆಂಚನಾಲ ಗ್ರಾಮ ಪಂಚಾಯಿತಿ ಪಿಡಿಓ ರವಿಕುಮಾರ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿದ್ದು, ಎಲ್ಲರೂ ಇದರ ಸದ್ಬಳಕೆ ಮಾಡಿಕೊಳ್ಳಿ ಎಂದು ಕರೆ ನೀಡಿದರು.
ಯಶಸ್ವಿಯಾಗಿ ಹೊಲಿಗೆ ತರಬೇತಿ ಪಡೆದ ಎಲ್ಲಾ ಸದಸ್ಯರಿಗೆ ಈ ಸಂದರ್ಭದಲ್ಲಿ ಪ್ರಮಾಣ ಪತ್ರ ನೀಡಲಾಯಿತು. ರಂಜಿತ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ವಲಯದ ಮೇಲ್ವಿಚಾರಕರಾದ ನಟರಾಜ್ ಉಪಸ್ಥಿತರಿದ್ದರು.
ಹೊಲಿಗೆ ಶಿಕ್ಷಕಿ ಲೋಕಮ್ಮ ತರಬೇತಿ ಪಡೆದ ಎಲ್ಲರಿಗೂ ಶುಭ ಹಾರೈಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶಾಂತಕುಮಾರಿ ನಿರೂಪಿಸಿ, ಸೇವಾ ಪ್ರತಿನಿಧಿ ರಾಜೇಶ್ವರಿ ಸ್ವಾಗತಿಸಿದರು. ಗೀತಾ ವಂದಿಸಿದರು.
ಕಾಮೆಂಟ್‌ಗಳಿಲ್ಲ