ಮೇಲಿನಬೆಸಿಗೆ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ - ಮಕ್ಕಳ ಶೈಕ್ಷಣಿಕ ಪ್ರಗತಿಗೆ ನಿರಂತರ ಪ್ರೋತ್ಸಾಹ ಮುಖ್ಯ : ಮೇಲಿನಬೆಸಿಗೆ ಗ್ರಾ. ಪಂ. ಅಧ್ಯಕ್ಷ ಶ್ರೀನಿವಾಸ ರೆಡ್ಡಿ
ಹೊಸನಗರ : ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಖಾಸಗಿ ಶಾಲೆಗಿಂತ ಉತ್ತಮವಾಗಿದ್ದು ಎಲ್ಲಾ ವಿಭಾಗಗಳಲ್ಲಿ ಪೈಪೋಟಿ ನೀಡುತ್ತಿದೆ. ಇದಕ್ಕೆ ಶಾಲೆಯ ನುರಿತ ಶಿಕ್ಷಕ ವರ್ಗ ಹಾಗೂ ಪೋಷಕರ ನಿರಂತರ ಬೆಂಬಲ ಕಾರಣ ಎಂದು ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ಹೇಳಿದರು.
ಮೇಲಿನಬೆಸಿಗೆ ಗ್ರಾಮದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2024-25ನೇ ಸಾಲಿನ ಶಾಲೆ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಉತ್ಸವ ನೃತ್ಯ ಸೌರಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಶಿಕ್ಷಣದ ಜೊತೆಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಶಾಲಾ ವಿದ್ಯಾರ್ಥಿಗಳು ಜಿಲ್ಲಾ, ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಕರಾಟೆ ಸೇರಿದಂತೆ ಅನೇಕ ಪಠ್ಯೇತರ ಚಟುವಟಿಕೆಯಲ್ಲೂ ಸಾಧನೆ ಮೆರೆದಿರುವುದು ಶ್ಲಾಘನೀಯ ಸಂಗತಿ. ಪೋಷಕರ ಜೊತೆ ದಾನಿಗಳು ಕೈ ಜೋಡಿಸಿದಲ್ಲಿ ಮಕ್ಕಳು ಮತ್ತಷ್ಟು ಸಾಧಿಸಲು ಸಾಧ್ಯವೆಂದ ಅವರು, ಶಾಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಲು ಸಿದ್ಧವಿರುವುದಾಗಿ ತಿಳಿಸಿದರು.
ಜನವರಿ 31ಕ್ಕೆ ಸೇವೆಯಿಂದ ವಯೋನಿವೃತ್ತಿ ಹೊಂದಲಿರುವ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರರಾವ್ ಅವರನ್ನು ಇದೇ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಿದರು.
ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪೂರ್ಣಿಮಾ ಸೋಮಶೇಖರ್ ಬಹುಮಾನ ವಿತರಿಸಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಜ್ಯೋತಿ, ಚಂದ್ರಕಲಾ, ಸಾಲಗೇರಿ ಲಕ್ಷ್ಮಣಗೌಡ, ಲಕ್ಷ್ಮೀದೇವಿ, ನಾಗರಾಜ್, ಶಾಂತಾ ಪಾಂಡು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಹೆಚ್.ಆರ್. ಸುರೇಶ್, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವಿ. ರಂಗಸ್ವಾಮಿ, ಸಮೂಹ ಸಂಪನ್ಮೂಲ ವ್ಯಕ್ತಿ ಆರ್. ನಾಗಭೂಷಣ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅವಿನಾಶ್, ಎಲ್‌ಕೆಜಿ ಶಾಲೆ ಅಧ್ಯಕ್ಷ ಸುಧೀರ್ ಶೆಟ್ಟಿ, ಪ್ರಭಾರಿ ಮುಖ್ಯ ಶಿಕ್ಷಕ ಜಿ.ಎ. ಗುರುಮೂರ್ತಿ, ಪ್ರೌಢಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಗೋಪಿನಾಥ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎರಗಿ ಉಮೇಶ್, ಶಿಕ್ಷಕ ಧರ್ಮಪ್ಪ, ಶಿಕ್ಷಕಿ ಸುಮಾಲಿನಿ, ಸಲ್ಮಾ, ಶಿಲ್ಪಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಗುರುಮೂರ್ತಿ ಸ್ವಾಗತಿಸಿ, ಶಿಕ್ಷಕಿ ಸುಲೋಚನ ವರದಿ ವಾಚಿಸಿದರು. ಅರ್ಚನಾ ನಿರೂಪಿಸಿದರು. ಪೂರ್ಣಿಮ ವಂದಿಸಿದರು.
ಕಾಮೆಂಟ್‌ಗಳಿಲ್ಲ