Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರ ಬ್ರದರ್ಸ್‌ ಅಂಬೇಡ್ಕರ್‌ ಟ್ರೋಫಿ ಟೆನ್ನಿಸ್ ಬಾಲ್ ಕ್ರಿಕೆಟ್‌ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು - ಸಂಬಂಧಗಳ ಬೆಸುಗೆಗೆ‌ ಕ್ರೀಡಾಕೂಟ ಸಹಕಾರಿ : ಬೇಳೂರು

ಹೊಸನಗರ : ಸಂಬಂಧಗಳ ಪರಸ್ಪರ ವೃದ್ಧಿಗೆ ಕ್ರೀಡಾಕೂಟಗಳ ಆಯೋಜನೆ ಸಹಕಾರಿಯಾಗಲಿದೆ‌ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯ ಪಟ್ಟರು.

ನ್ಯೂಸ್‌ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ

ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಕೋರಾರ್ ಹಾಗೂ ಕೊರಗ ಸಮಾಜ ಬಾಂಧವರಿಗಾಗಿ ಹಮ್ಮಿಕೊಂಡಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ವಿಜೇತ ತಂಡಕ್ಕೆ ಬಹುಮಾನ ವಿತರಿಸಿ ಅವರು ಮಾತನಾಡುತ್ತಿದ್ದರು.

ತುಳಿತಕ್ಕೆ ಒಳಗಾದ ಈ ಸಮಾಜವು ಇಂದು ಸಮಾಜದ ಎಲ್ಲಾ ಸ್ತರಗಳಲ್ಲಿ ಸಮಾನತೆ ಸಾಧಿಸಲು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಕಾರಣ. ಕೇವಲ ಪಟ್ಟಣದ ಸ್ವಚ್ಛತೆಗೆ ಮೀಸಲು ಎಂಬ ಹಣೆಪಟ್ಟಿಯನ್ನು ತೊಡೆದು ಹಾಕಿ ಶೈಕ್ಷಣಿಕ, ಆರ್ಥಿಕವಾಗಿ ಮುಂಚೂಣಿಗೆ ಬಂದಿರುವ ಸಂಗತಿ ಇತರರಿಗೆ ಪ್ರೇರಣೆಯಾಗಿದೆ. ಸದಾ ಸಮಾಜದ ಏಳಿಗೆಗೆ‌ ಶ್ರಮಿಸುತ್ತಿರುವ ಈ‌ ಶೋಷಿತ ವರ್ಗದ ಅಭಿವೃದ್ಧಿಯ ಮನವಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಪಂದ್ಯಾವಳಿಯಲ್ಲಿ ಶಂಕರನಾರಾಯಣ ತಂಡ ಪ್ರಥಮ ಸ್ಥಾನ ಗಳಿಸಿದರೆ, ಸ್ಥಳೀಯ ತಂಡ ರನ್ನರ್ ಅಪ್‌ ಸ್ಥಾನಕ್ಕೆ ಪಾತ್ರವಾಯಿತು.

CLICK ಮಾಡಿ - ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಹೊಸನಗರದಲ್ಲಿ ಗ್ರಾಮ ಆಡಳಿತಾಧಿಕಾರಿ ಸಂಘದಿಂದ ಅನಿರ್ದಿಷ್ಟ ಕಾಲ ಎರಡನೇ ಹಂತದ ಮುಷ್ಕರ

ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ನಾಗಪ್ಪ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಗಳಾಗಿ ಬಿಜೆಪಿ ಮುಖಂಡ ದೇವಾನಂದ್, ಶ್ರೀಪತಿ ರಾಯ, ಸದಸ್ಯರಾದ ಗುರುರಾಜ್ ಆರ್, ಸಿಂಥಿಯಾ ಶೆರಾವೋ, ಶಾಹಿನ‌, ಹೊಸನಗರ ಬ್ರದರ್ಸ್ ಕ್ರಿಕೆಟರ್ಸ್ ಗೌರವಾಧ್ಯಕ್ಷ ನಾಗಪ್ಪ, ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ‌ಅಧ್ಯಕ್ಷ ಎನ್.ಜಿ. ಪ್ರವೀಣ್, ಹಿಟಾಚಿ ಶ್ರೀಧರ್, ನಾಸೀರ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ನೋಟ್ ಬುಕ್‌ ವಿತರಣೆ, ಸಾಧಕರಿಗೆ ಸನ್ಮಾನ ನೆರವೇರಿತು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ, ಮನೋರಂಜನಾ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಉಮೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌ಗಳಿಲ್ಲ