ಹೊಸನಗರ ಮಾರಿಕಾಂಬಾ ಜಾತ್ರಾ ಮಹೋತ್ಸವ - ಶಾಲಾ ಮಕ್ಕಳ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಗೋಪಾಲಕೃಷ್ಣ ಬೇಳೂರು
ಹೊಸನಗರ : ಜಾತ್ರೆ, ಧಾರ್ಮಿಕ ಮಹೋತ್ಸವಗಳು ನಮ್ಮ ಸನಾತನ ಸಂಸ್ಕೃತಿಯ ಜೀವಂತಿಕೆಯ ಸಂಕೇತವಾಗಿದೆ. ಆದ್ದರಿಂದ ಇದನ್ನು ಪರಸ್ಪರ ಸಣ್ಣ-ಪುಟ್ಟ ಭಿನ್ನಾಭಿಪ್ರಾಯ ತೊರೆದು ಎಲ್ಲರೂ ಒಗ್ಗೂಡಿ ಆಚರಿಸಲು ಮುಂದಾಗಬೇಕು ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ, ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ನ್ಯೂಸ್ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ
ಇದೇ ಫೆಬ್ರವರಿ 4ರಿಂದ 12ರವರೆಗೆ ಪಟ್ಟಣದಲ್ಲಿ ನಡೆಯುತ್ತಿರುವ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಶಾಲಾ ಮಕ್ಕಳ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಜಾತ್ರಾ ಆಚರಣಾ ಸಮಿತಿ ಈ ಬಾರಿಯೂ ವಿವಿಧ ಮನೋರಂಜನಾ ಅದ್ಧೂರಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಶಾಲಾ ಮಕ್ಕಳ ಸಾಂಸ್ಕೃತಿಕ ಚಟುವಟಿಕೆಗಳ ಅನಾವರಣಕ್ಕೆ ವೇದಿಕೆ ಕಲ್ಪಿಸಿಕೊಟ್ಟಿರುವುದು ಶ್ಲಾಘನೀಯ ಸಂಗತಿಯಾಗಿದೆ. ಸಮಿತಿಯ ಕೋರಿಕೆ ಮೇರೆಗೆ ಕ್ಷೇತ್ರದ ಶಾಸಕನಾಗಿ ದೇವಸ್ಥಾನದ ಅಭಿವೃದ್ದಿ ಕಾರ್ಯಗಳಿಗಾಗಿ ರೂ. 10 ಲಕ್ಷ ಅನುದಾನ ಮೀಸಲಿಟ್ಟಿದ್ದೇನೆ. ಮುಂಬರುವ ದಿನಗಳಲ್ಲಿ ಜಾತ್ರಾ ಸಮಿತಿಯಿಂದ ಶಾಲೆ, ಹಾಸ್ಟೆಲ್, ವಿವಾಹ ಕಾರ್ಯಗಳಿಗಾಗಿ ಸಭಾ ಭವನ ಸೇರಿದಂತೆ ವಿವಿಧ ಜನಪರ ಕಾರ್ಯಗಳು ನಡೆಯುವಂತಾಗಲಿ ಎಂಬ ಆಶಯ ವ್ಯಕ್ತ ಪಡಿಸಿದರು.
CLICK ಮಾಡಿ - ಹೊಸನಗರ ಮಾರಿಕಾಂಬಾ ಜಾತ್ರೆಯಲ್ಲಿ ಮಹಿಳೆಯರ ಮನ ಸೂರೆಗೊಳ್ಳುತ್ತಿದೆ ಖಾದಿ ವಸ್ತ್ರ ವಿನ್ಯಾಸ ಮಳಿಗೆ
ಜಾತ್ರಾ ಸಮಿತಿ ಅಧ್ಯಕ್ಷ ಹೆಚ್. ಲಕ್ಷ್ಮೀ ನಾರಾಯಣರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಶಿರಸಿ ಮಾರಿಕಾಂಬಾ ಜಾತ್ರೆ ಸಮಿತಿ ಅಧ್ಯಕ್ಷ ರವೀಂದ್ರ ಜಿ ನಾಯಕ್, ಸಾಗರ ಮಾರಿಕಾಂಬಾ ಜಾತ್ರೆ ಸಮಿತಿ ಅಧ್ಯಕ್ಷ ನಾಗೇಂದ್ರಪ್ಪ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಜಿ. ನಾಗರಾಜ್, ಪ್ರಮುಖರಾದ ಶ್ರೀನಿವಾಸ್ ಕಾಮತ್, ಸರ್ಕಲ್ ಗಿರೀಶ್, ಸುನಂದಮ್ಮ, ಶೇಷಮ್ಮ, ಹೊಬ್ಳಿದಾರ್, ಜಾತ್ರಾ ಸಮಿತಿ ಸಂಚಾಲಕರಾದ ಸುನೀಲ್ ಕುಮಾರ್, ಮನೋಹರ್, ಗೋಪಿ, ಎ.ವಿ. ಮಲ್ಲಿಕಾರ್ಜುನ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಅಶ್ವಿನಿ ಪಂಡಿತ್ ನಿರೂಪಿಸಿ, ವಂದಿಸಿದರು.
ಕಾಮೆಂಟ್‌ಗಳಿಲ್ಲ