ಗ್ಯಾರಂಟಿ ಅನುಷ್ಠಾನ ಸಮಿತಿ ತಾ. ಅಧ್ಯಕ್ಷ ಚಿದಂಬರ ಅವರಿಗೆ ಪಿತೃವಿಯೋಗ
ಹೊಸನಗರ : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಹೆಚ್.ಬಿ.ಚಿದಂಬರ ಅವರ ತಂದೆ, ಕೃಷಿಕ ಭರ್ಮಪ್ಪ(70) ಇಂದು ಸಂಜೆ 4.15ಕ್ಕೆ ನಿಧನರಾದರು.
ನ್ಯೂಸ್ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ
ಮೃತರ ಆತ್ಮಕ್ಕೆ ಶಾಂತಿ ದೊರೆತು, ಕುಟುಂಬ ವರ್ಗದವರಿಗೆ ದೇವರು ನೋವು ಭರಿಸುವ ಶಕ್ತಿ ನೀಡಲಿ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎರಗಿ ಉಮೇಶ್, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕಾಮೆಂಟ್‌ಗಳಿಲ್ಲ