ಅರ್ಥಪೂರ್ಣವಾಗಿ ಮಹಿಳಾ ದಿನಾಚರಣೆ ಆಚರಿಸಿದ ಹೊಸನಗರ ಠಾಣೆ ಪೊಲೀಸ್ ಸಿಬ್ಬಂದಿ ಕೌಸಲ್ಯ
ಹೊಸನಗರ : ಇಲ್ಲಿನ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಕೌಸಲ್ಯ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.
VIDEO - ಹೊಸನಗರ ಪೊಲೀಸ್ ಠಾಣಾ ಸಿಬ್ಬಂದಿ ಕೌಸಲ್ಯ ಅವರಿಂದ ವಿಶಿಷ್ಟ ರೀತಿಯಲ್ಲಿ ಮಹಿಳಾ ದಿನಾಚರಣೆ
ಹೊಸನಗರ ಬಸ್ ನಿಲ್ದಾಣಕ್ಕೆ ಬಂದು ಹೋಗುವ ಬಸ್ಸುಗಳ ಚಾಲಕರು-ನಿರ್ವಾಹಕರು ಹಾಗೂ ಏಜೆಂಟ್‌ಗಳಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸಿಹಿ ಹಣ್ಣು, ಪಾನೀಯಗಳನ್ನೊಳಗೊಂಡ ಪ್ಯಾಕೆಟ್‌ಗಳನ್ನು ಬಸ್ ನಿಲ್ದಾಣದ ಪೊಲೀಸ್ ಚೌಕಿಯಲ್ಲಿ ವಿತರಿಸಿದ ಕೌಸಲ್ಯ ಅವರಿಗೆ, ಎಲ್ಲರೂ ಮಹಿಳಾ ದಿನಾಚರಣೆಯ ಶುಭಾಶಯ ತಿಳಿಸಿದರು. ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದ ಕೌಸಲ್ಯ ಅವರ ನಡೆಗೆ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದರು.
ಕಾಮೆಂಟ್‌ಗಳಿಲ್ಲ