Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ನಿಧನ ವಾರ್ತೆ - ಕಾರಣಗಿರಿ ದೇವಸ್ಥಾನದ ಅರ್ಚಕ ವಿನಾಯಕ ಭಟ್ಟರು

ಹೊಸನಗರ : ತಾಲ್ಲೂಕಿನ ಶ್ರೀ ಕ್ಷೇತ್ರ ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕರಾದ ವಿನಾಯಕ ಭಟ್ಟರು ಅಲ್ಪಕಾಲದ ಅನಾರೋಗ್ಯದಿಂದಾಗಿ ಇಂದು ಇಹಲೋಕ ತ್ಯಜಿಸಿದರು.

ಕಾರಣಗಿರಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ವಿನಾಯಕ ಭಟ್ಟರು ಅಲ್ಪಕಾಲದಿಂದ ಅನಾರೋಗ್ಯ ಪೀಡಿತರಾಗಿದ್ದರು. 54 ವರ್ಷ ವಯಸ್ಸಿನ ವಿನಾಯಕ ಭಟ್ಟರು ಪತ್ನಿ, ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದು, ಅವರ ನಿಧನಕ್ಕೆ ಶ್ರೀ ಕ್ಷೇತ್ರ ಕಾರಣಗಿರಿ ಶ್ರೀಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಮಂಡಳಿಯವರು, ರಾಷ್ಟ್ರೋತ್ಥಾನ ಬಳಗದವರು ಮತ್ತು ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

ಕಾಮೆಂಟ್‌ಗಳಿಲ್ಲ