Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರದ ವಿಜಾಪುರದಲ್ಲಿ ಮೇಯಲು ಹೋಗಿದ್ದ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು - ದೂರು ದಾಖಲು

ಹೊಸನಗರ : ಮೇಯಲು ಹೋಗಿದ್ದ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ತಾಲ್ಲೂಕಿನ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ನಿನ್ನೆ ನಡೆದಿದೆ.

ಗ್ರಾಮದ ವಿಜಯ್‌ ಎನ್ನುವವರು ಶನಿವಾರ ಬೆಳಿಗ್ಗೆ ತಾವು ಸಾಕಿದ ಹಸುವನ್ನು ಮೇಯಲು ಹೊರಗಡೆ ಬಿಟ್ಟಿದ್ದರು. ಶನಿವಾರ ಸಂಜೆ 4:30ರ ಸುಮಾರಿಗೆ ಊರಿನ ಜನರು ಅವರ ಫೋನಿಗೆ ಕರೆ ಮಾಡಿ, ನಿಮ್ಮ ದನದ ಕೆಚ್ಚಲಿನಲ್ಲಿ ರಕ್ತ ಸೋರುತ್ತಿರುವುದಾಗಿ ವಿಷಯ ತಿಳಿಸಿದರು. ತಕ್ಷಣವೇ ಸ್ಥಳಕ್ಕೆ ಹೋಗಿ ನೋಡಿದಾಗ 9 ವರ್ಷ ಪ್ರಾಯದ ಕರು ಹಾಕಿದ ಮಲೆನಾಡು ಗಿಡ್ಡ ತಳಿಯ ಹಸುವಿನ ಕೆಚ್ಚಲಿನಿಂದ ರಕ್ತ ಸೋರುತ್ತಿರುವುದು ಕಂಡು ಬಂದಿದ್ದು, ಯಾರೋ ಉದ್ದೇಶಪೂರ್ವಕವಾಗಿ ದನದ ಕೆಚ್ಚಲು ಕೊಯ್ದಿರುವಂತೆ ಕಂಡು ಬಂದಿದೆ.

CLICK ಮಾಡಿ - ಕೋಡೂರು ಗ್ರಾಮ ಪಂಚಾಯ್ತಿ ಎದುರು ಹಾರೆ, ಗುದ್ದಲಿ, ಬುಟ್ಟಿಯೊಂದಿಗೆ ರೈತರ ದಿಢೀರ್ ಪ್ರತಿಭಟನೆ

ನಂತರ ಗ್ರಾಮಸ್ಥರ ಸಹಾಯದಿಂದ ದನವನ್ನು ಮನೆಗೆ ಕರೆತಂದು ಪಶು ವೈದ್ಯರಿಂದ ಹೊಲಿಗೆ ಹಾಕಿಸಿ ಚಿಕಿತ್ಸೆ ಕೊಡಿಸಿರುವುದಾಗಿ ತಿಳಿಸಿದ್ದು, ಆನಂತರ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾಮೆಂಟ್‌ಗಳಿಲ್ಲ