ಭಾಷಣ - ಪ್ರಬಂಧ ಸ್ಪರ್ಧೆಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರು
ಹೊಸನಗರ : ತಾಲ್ಲೂಕಿನ ಜೇನಿ ಗ್ರಾಮ ಪಂಚಾಯಿತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲಾ ಮಟ್ಟದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಗೆಲುವು ದಾಖಲಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.
ಪ್ರಾಚ್ಯ ಪ್ರಜ್ಞೆ ಸ್ಪರ್ಧೆ ಹಾಗೂ ಬಾಲವಿಕಾಸ ಭಾಷಣ ಸ್ಪರ್ಧೆಯಲ್ಲಿ ಕುಮಾರಿ ಕೆ.ಎನ್. ಸ್ಫೂರ್ತಿ, ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಕುಮಾರಿ ಸೌಜನ್ಯ, ಪ್ರಬಂಧ ಸ್ಪರ್ಧೆಯಲ್ಲಿ ಕುಮಾರಿ ಸಂಜನಾ ಗೆಲುವು ಸಾಧಿಸಿ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸರ್ಕಾರಿ ಶಾಲೆಯ ಈ ಗ್ರಾಮೀಣ ಪ್ರತಿಭೆಗಳು ರಾಜ್ಯಮಟ್ಟದಲ್ಲೂ ತಮ್ಮ ಪ್ರತಿಭೆಯ ಮೂಲಕ ಸಾಧನೆಗೈದು ಮಲೆನಾಡಿನ ಹಿರಿಮೆಯನ್ನು ಹೆಚ್ಚಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್, ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ರಂಗನಾಥ್, ಶಿಕ್ಷಣ ಸಂಯೋಜಕ ಕರಿಬಸಪ್ಪ, ಶಾಲಾ ಮುಖ್ಯ ಶಿಕ್ಷಕರಾದ ಬಿ.ಎನ್. ಪರಶುರಾಮಪ್ಪ, ಮಾರ್ಗದರ್ಶಿ ಶಿಕ್ಷಕ ಎಂ.ಎಂ. ರವಿಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ರಮೇಶ್, ಉಪಾಧ್ಯಕ್ಷ ಉಮೇಶ್, ಶ್ರೀಮತಿ ವಾಸಂತಿ ಬಸವನಗೌಡ, ಶ್ರೀಕಾಂತ್, ಪೂಜಾ ನಾಗೇಶ್, ರೇವಣಸಿದ್ದಪ್ಪ, ಬಾಲಾಜಿ ಹಾಗೂ ಪೋಷಕರು, ಗ್ರಾಮಸ್ಥರು ಮತ್ತು ಎಸ್‌ಡಿಎಂಸಿ ಸದಸ್ಯರುಗಳು ಹಾರೈಸಿದ್ದಾರೆ.





ಕಾಮೆಂಟ್‌ಗಳಿಲ್ಲ