Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ರಿಪ್ಪನ್‌ಪೇಟೆ ಸಮೀಪ ಅರಣ್ಯ ಪ್ರದೇಶದಲ್ಲಿದ್ದ 4 ಲಕ್ಷ ಮೌಲ್ಯದ ಸಾಗುವಾನಿ ಮರ ಅಕ್ರಮ ಕಡಿತಲೆ - ಇಷ್ಟು ದೊಡ್ಡ ಪ್ರಮಾಣದಲ್ಲಿ ಮರ ಕಡಿಯುವವರೆಗೂ ಏನು ಮಾಡುತ್ತಿತ್ತು ಅರಣ್ಯ ಇಲಾಖೆ ?!

ಹೊಸನಗರ : ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆಳಂದೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡಿದಿದ್ದ ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಸಾಗುವಾನಿ ಮರದ ನಾಟಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.


ಬೆಳಂದೂರು ಗ್ರಾಮದ ಸರ್ವೆ ನಂಬರ್ 51ರ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿದಿರುವ ಕುರಿತು ಅರಣ್ಯ ಇಲಾಖೆಗೆ ಇತ್ತೀಚೆಗೆ ಮಾಹಿತಿ ಲಭ್ಯವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಬೃಹದಾಕಾರದ ಮರಗಳನ್ನು ತುಂಡುಗಳಾಗಿ ಕತ್ತರಿಸಿ ಇಟ್ಟಿರುವುದು ಪತ್ತೆಯಾಗಿದೆ.

CLICK ಮಾಡಿ : ಹೊಸನಗರ ಪೊಲೀಸ್ ಠಾಣೆ ಆವರಣದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ


ಅರಣ್ಯಾಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಸ್ಥಳದಲ್ಲಿ ಒಟ್ಟು 24 ಸಾಗುವಾನಿ ಮರದ ತುಂಡುಗಳು ಪತ್ತೆಯಾಗಿದ್ದು, ಇವುಗಳ ಒಟ್ಟು ಉದ್ದ ಸುಮಾರು 100 ಅಡಿ ಎಂದು ಅಂದಾಜಿಸಲಾಗಿದೆ. ವಶಪಡಿಸಿಕೊಂಡ ಮರದ ನಾಟಾಗಳ ಮಾರುಕಟ್ಟೆ ಮೌಲ್ಯ ಸುಮಾರು 4 ಲಕ್ಷ ರೂಪಾಯಿ ಇದೆ ಎಂದು ಅರಣ್ಯ ಇಲಾಖೆ ಅಂದಾಜಿಸಿದೆ.


ಇತ್ತೀಚೆಗೆ ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ಕಾರ್ಯದ ಬಗ್ಗೆ ಅನುಮಾನಗಳು ಹುಟ್ಟಿದ್ದು, ಜಿಂಕೆ ಮಾಂಸದ ಪ್ರಕರಣವೂ ಇದೇ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿದ್ದನ್ನು ನೆನಪಿಸಿಕೊಳ್ಳಬಹುದು. ಈಗ ಅರಣ್ಯ ಪ್ರದೇಶದಲ್ಲಿದ್ದ ಬೃಹತ್ ಪ್ರಮಾಣದಲ್ಲಿ ಮರದ ಕಡಿತಲೆಯಾಗುತ್ತಿದ್ದರೂ ಇಲಾಖೆಯ ಗಮನಕ್ಕೆ ಬಾರದೇ ಇರುವುದು ಸಹಜವಾಗಿಯೇ ಇಲಾಖೆಯ ಕಾರ್ಯವೈಖರಿ ಬಗ್ಗೆ ಅನುಮಾನಗಳು ಹುಟ್ಟಿಕೊಳ್ಳಲು ಕಾರಣವಾಗಿದೆ. ಈ ನಡುವೆ ಈ ಮರ ಕಡಿತಲೆ ಹಿಂದೆ ಯಾರಿದ್ದಾರೆ ಎನ್ನುವ ಕುರಿತು ಅರಣ್ಯ ಇಲಾಖೆ ತನಿಖೆ ಕೈಗೊಂಡಿದೆ.


ಕಾಮೆಂಟ್‌ಗಳಿಲ್ಲ